ಶಿವಮೊಗ್ಗದ ಲೈವ್.ಕಾಂ | BANGALORE NEWS | 24 ಜನವರಿ 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಕೂಡ ಬದಲಾಗಿದ್ದಾರೆ.
ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗದ ಉಸ್ತುವಾರಿ ಸಚಿವರಾಗಿದ್ದರು. ಆದರೆ ಈ ಭಾರಿ ಅವರಿಗೆ ಪಕ್ಕದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ.
ಈವರೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದರು. ಇನ್ಮುಂದೆ ಅವರು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನಿಭಾಯಿಸಬೇಕಿದೆ.
ಇನ್ನು, ಶಿವಮೊಗ್ಗ ಜಿಲ್ಲೆಗೆ ಹೊಸ ಸಚಿವರನ್ನು ನೇಮಿಸಲಾಗಿದೆ. ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ರೇಷ್ಮೆ ಇಲಾಖೆ ಸಚಿವ ನಾರಾಯಣಗೌಡ ಅವರಿಗೆ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದೇ ಮೊದಲ ಭಾರಿ ಹೊರ ಜಿಲ್ಲೆಯವರೊಬ್ಬರು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೂ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನಿರ್ವಹಿಸಿದ್ದರು. ಆ ಬಳಿಕ ಸಚಿವ ಈಶ್ವರಪ್ಪ ಅವರೆ ಜಿಲ್ಲಾ ಉಸ್ತುವಾರಿಯಾಗಿದ್ದರು. ಆದರೆ ಮಹತ್ವದ ಬೆಳೆವಣಿಗೆಯಲ್ಲಿ ಹೊರ ಜಿಲ್ಲೆಯವರಿಗೆ ಉಸ್ತುವಾರಿ ಸಚಿವರಾಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200