ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JUNE 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಈ ಆದೇಶ ಜುಲೈ 5ರ ಬೆಳಿಗ್ಗೆ 5 ಗಂಟೆವರೆಗೆ ಜಾರಿಯಲ್ಲಿರಲಿದೆ. ಕಂಟೈನ್ಮೆಂಟ್ ವಲಯದಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಯಾವುದಿರುತ್ತೆ? ಯಾವುದಕ್ಕೆ ಅವಕಾಶವಿಲ್ಲ?
ಹವಾನುಕೂಲಿತ ಅಂಗಡಿಗಳು, ಹವಾನುಕೂಲಿತ ಶಾಪಿಂಗ್ ಕಾಂಪ್ಲೆಕ್ಸ್ಗಳು, ಮಾಲ್ಗಳಿಗೆ ಅನುಮತಿ ನೀಡಲಾಗಿಲ್ಲ.
ಎಲ್ಲಾ ವಸ್ತುಗಳ ಹೋಂ ಡೆಲಿವರಿಗೆ ಸಂಪೂರ್ಣ ಅವಕಾಶ ನೀಡಲಾಗಿದೆ.
ಎಲ್ಲಾ ರೀತಿಯ ಕೈಗಾರಿಕೆಗಳಿಗೆ ಶೇ.50ರಷ್ಟು ಸಿಬ್ಬಂದಿಯನ್ನು ಬಳಸಿಕೊಂಡು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಗಾರ್ಮೆಂಟ್ಸ್ ಕೈಗಾರಿಕೆ ಶೇ.30ರಷ್ಟು ಸಿಬ್ಬಂದಿಯನ್ನು ಮಾತ್ರ ಬಳಸಬಹುದಾಗಿದೆ.
ಹೊಟೇಲ್, ರೆಸ್ಟೋರೆಂಟ್, ಬಾರ್ಗಳು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಶೇ. 50ರಷ್ಟು ಸಾಮರ್ಥ್ಯವನ್ನು ಬಳಸಿಕೊಂಡು ವಹಿವಾಟು ನಡೆಸಬಹುದು. ಮದ್ಯವನ್ನು ಸ್ಥಳದಲ್ಲಿಯೇ ಸೇವಿಸಲು ಅವಕಾಶವಿರುವುದಿಲ್ಲ. ಎಸಿ ಹೊಟೇಲ್, ರೆಸ್ಟೋರೆಂಟ್, ಬಾರ್ ಮತ್ತು ಕ್ಲಬ್ಗಳಿಗೆ ಅವಕಾಶವಿರುವುದಿಲ್ಲ.
ಲಾಡ್ಜ್, ರೆಸಾರ್ಟ್ಗಳು ಸಹ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬಹುದು.
ಎಲ್ಲಾ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.
ಪಾರ್ಕ್ಗಳಲ್ಲಿ ಬೆಳಿಗ್ಗೆ 5 ರಿಂದ ಸಂಜೆ 6 ರವರೆಗೆ ವಾಕಿಂಗ್ ಮತ್ತು ಜಾಗಿಂಗ್ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಹವಾನುಕೂಲಿತವಲ್ಲದ ಜಿಮ್ಗಳು ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಬಹುದಾಗಿದೆ.
ಎಲ್ಲಾ ಹೊರಾಂಗಣ ಕ್ರೀಡೆಗಳಿಗೆ ಅನುಮತಿಸಲಾಗಿದ್ದು, ಪ್ರೇಕ್ಷಕರು ಸೇರುವಂತಿಲ್ಲ.
ಪ್ರತಿ ದಿನ ರಾತ್ರಿ 7 ರಿಂದ ಮರುದಿನ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಅವಶ್ಯಕ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
ವೈದ್ಯಕೀಯ, ಸರಕು ಸಾಗಾಣಿಕೆ ವಾಹನಗಳ ಸಂಚಾರ, ಬಸ್, ರೈಲು ಸಂಚಾರ, ಹೋಂ ಡೆಲಿವರಿ ಇತ್ಯಾದಿ ಅವಶ್ಯಕ ಚಟುವಟಿಕೆಗಳಿಗೆ ಅವಕಾಶವಿರಲಿದೆ.
ಇದೇ ರೀತಿ ವಾರಾಂತ್ಯದಲ್ಲಿ ಅಂದರೆ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.
ಸರ್ಕಾರ ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡುವುದು ಕಡ್ಡಾಯವಾಗಿದ್ದು, ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.