BENGALURU : ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಇವತ್ತು ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಅವರನ್ನು ಭೇಟಿಯಾಗಿ ಮೂರು ಪ್ರಮುಖ ಬೇಡಿಕೆಗಳ (Demands) ಮನವಿ ಸಲ್ಲಿಸಿದರು.
ಎಂಎಲ್ಎ ಮೂರು ಬೇಡಿಕೆಗಳು ಏನು?
ಬೇಡಿಕೆ 1 : ಶಿವಮೊಗ್ಗ ನಗರದ ಮದರಿಪಾಳ್ಯದ ಶ್ರೀ ಕಲ್ಲೇಶ್ವರ ದೇವಸ್ಥಾನದ ಪಕ್ಕ ತುಂಗಾ ನದಿಯ ಪ್ರವಾಹದಿಂದ ಆಸ್ತಿಪಾಸ್ತಿ, ಮನೆಗಳು ಹಾನಿಗೀಡಾಗುತ್ತಿವೆ. ಆದ್ದರಿಂದ ತುಂಗಾ ನದಿಯ ಬಲದಂಡೆಗೆ ಸುಮಾರು 100 ಮೀಟರ್ ಉದ್ದಕ್ಕೆ ರಕ್ಷಣಾ ಗೋಡೆ ನಿರ್ಮಾಣಕ್ಕೆ ಕರ್ನಾಟಕ ನೀರಾವರಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡಬೇಕು.
ಬೇಡಿಕೆ 2 : ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ನೀರು ಕೆರೆ ಕಟ್ಟೆ ತುಂಬಿ ಭದ್ರಾ ಎಡದಂಡೆ ಕಾಲುವೆ ಮೂಲಕ ಹರಿಯುತ್ತದೆ. ಈ ನೀರು ಶಿವಮೊಗ್ಗ ನಗರದ ಅನೇಕ ಬಡಾವಣೆಗಳಿಗೆ ನುಗ್ಗಿ ಪ್ರವಾಹ ಉಂಟಾಗುತ್ತಿದೆ. ಹೆಚ್ಚುವರಿ ನೀರು ಹೊರಗೆ ಹರಿದು ಬಿಡಲು ಬೀಡು ಗುಂಡಿಗಳು ಇಲ್ಲ. ಆದ್ದರಿಂದ ಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಬೀಡು ಗುಂಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು.
ಬೇಡಿಕೆ 3 : ತುಂಗಾ ಮೇಲ್ದಂಡೆ ಯೋಜನೆಯ ನಿಗಮದ ಜಾಗವನ್ನು ಒತ್ತುವರಿ ಮಾಡಿ, ಕಬಳಿಸುವ ಪ್ರಯತ್ನವಾಗುತ್ತಿದೆ. ಆದ್ದರಿಂದ 22 ಕಿ.ಮೀ ತಂತಿ ಬೇಲಿ ಹಾಕುವ ಕಾಮಗಾರಿಗೆ ಅನುದಾನ ಬಿಡುಗಡೆ ಮನವಿ ಮಾಡಲಾಯಿತು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ