ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2020
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆಯ ಮೂರು ವಿದ್ಯಾರ್ಥಿನಿಯರು RANK ಪಡೆದುಕೊಂಡಿದ್ದಾರೆ.

RANK ಪಡೆದ ಮೂವರು ಯಾರು?
ಅಖಿಲಾ ಹೆಗಡೆ | ಸಾಗರ ಸರ್ಕಾರಿ ಪಿಯು ಕಾಲೇಜು | ವಿಜ್ಞಾನ ವಿಭಾದಲ್ಲಿ ರಾಜ್ಯಕ್ಕೆ ಮೂರನೇ RANK
ಸಿಂಧು | ಸಾಗರ ಸರ್ಕಾರಿ ಪಿಯು ಕಾಲೇಜು | ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೂರನೇ RANK
ಸಹನಾ | ಶಿವಮೊಗ್ಗ ಆದಿಚುಂಚನಗಿರಿ ಕಾಲೇಜು | ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 5ನೇ RANK
ಜಿಲ್ಲೆಯ ಫಲಿತಾಂಶವೇನು?
ಈ ಬಾರಿ ಶಿವಮೊಗ್ಗ ಜಿಲ್ಲೆ ಶೇ.72.19 ಫಲಿತಾಂಶ ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ ಶೇ.68.68ರಷ್ಟು ಫಲಿತಾಂಶದೊಂದಿಗೆ 9ನೇ ಸ್ಥಾನಕ್ಕೇರಿತ್ತು. ಈ ಬಾರಿ ಸ್ಥಾನ ಕುಸಿತವಾಗಿದ್ದರೂ, ಉತ್ತೀರ್ಣರಾಗುವವರ ಸಂಖ್ಯೆ ಹೆಚ್ಚಳವಾಗಿದೆ.
ಎಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ?
ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ 8,520 ವಿದ್ಯಾರ್ಥಿಗಳು ಮತ್ತು 11,098 ವಿದ್ಯಾರ್ಥಿನಿಯರು ಪರೀಕ್ಷೆ ಎದುರಿಸಿದ್ದರು. ಈ ಪೈಕಿ ಕಲಾ ವಿಭಾಗದಲ್ಲಿ 5762 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದ್ದು. ಇದರಲ್ಲಿ 2589 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 7463 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 5142 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 6443 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 5229 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















