ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಗರಂ, ಏನಂದ್ರು ಸದಸ್ಯ ಶಶಿಧರ ಕೋಸಂಬೆ?

ಬೆಂಗಳೂರು: ಶಿವಮೊಗ್ಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿ (Student) ಗಂಡು ಮಗುವಿಗೆ ಜನ್ಮ ನೀಡಿರುವ ಪ್ರಕರಣ ಸಂಬಂಧ ತಕ್ಷಣ ಪ್ರಕರಣ ದಾಖಲು ಮಾಡಿಕೊಂಡು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದ್ದಾರೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರಿನಲ್ಲಿ ಮಾತನಾಡಿರುವ ಶಶಿಧರ ಕೋಸಂಬೆ, ಪೋಕ್ಸೊ ಕಾಯ್ದೆ ಪ್ರಕಾರ ಘಟನೆ ನಡೆದು 24 ಗಂಟೆಯೊಳಗೆ ಪ್ರಕರಣ ದಾಖಲಿಸಿಕೊಳ್ಳಬೇಕು. ತ್ವರಿತವಾಗಿ ತನಿಖೆ ನಡೆಸಬೇಕು. ಘಟನೆ ಕುರಿತು ಶಿವಮೊಗ್ಗದ ಹೆಚ್ಚುವರಿ ರಕ್ಷಣಾಧಿಕಾರಿ ಜೊತೆ ಚರ್ಚೆ ಮಾಡಿದ್ದೇನೆ. ಈವರೆಗೆ ಪ್ರಕರಣ ದಾಖಲಾಗದ ಹಿನ್ನೆಲೆ ಕೂಡಲೆ ಸಂಬಂಧಿಸಿದ ಪೊಲೀಸ್‌ ಠಾಣೆಗೆ ಭೇಟಿ ನೀಡಿ, ಕೂಡಲೆ ಪ್ರಕರಣ ದಾಖಲಿಸಬೇಕು. ಈ ಕುರಿತು ಆಯೋಗಕ್ಕೆ ವರದಿ ಸಲ್ಲಿಸಬೇಕು. ಇಲ್ಲವಾದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲು ಮಾಡಿಕೊಳ್ಳಲಿದೆ ಎಂದು ಎಚ್ಚರಿಸಿದರು.

ಇನ್ನು, ಆಸ್ಪತ್ರೆಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಇಂತಹ ದುರ್ಘಟನೆ ನಡೆಯುತ್ತಿರುವುದ ಕಳವಳಕಾರಿ. ಮನೆಯಲ್ಲಿ ತಾಯಿ ತಮ್ಮ ಮಕ್ಕಳ ಚಲನವಲನ, ದೈಹಿಕ ಬದಲಾವಣೆ ಕುರಿತು ಗಮನ ಹರಿಸಬೇಕು ಎಂದು ಶಶಿಧರ ಕೋಸಂಬೆ ಮನವಿ ಮಾಡಿದರು.

Shashidhar-Kosambe-speaks-about-9-standard-student

ಇದನ್ನೂ ಓದಿ » ಶಿವಮೊಗ್ಗದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

kscpcr member reacts to student incident

Leave a Comment