ಶಿವಮೊಗ್ಗ ಲೈವ್.ಕಾಂ | SHIMOGA UPDATE | 11 ನವೆಂಬರ್ 2019
NEWS 1 : ಶಿವಮೊಗ್ಗ : ತಿರುಪತಿ, ಚೆನ್ನೈ ಮತ್ತು ಮೈಸೂರು ಹೊಸ ರೈಲುಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ಶಿವಮೊಗ್ಗದಿಂದ ವಾರಕ್ಕೆ ಒಮ್ಮೆ ಮಾತ್ರ ತಿರುಪತಿ, ಚೆನ್ನೈಗೆ ರೈಲು ಸಂಚರಿಸುತ್ತಿವೆ. ಇದನ್ನು ಇನ್ನೆರಡು ದಿನಕ್ಕೆ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
NEWS 2 : ಜೋಗ ಕಾರ್ಗಲ್ : ಪಟ್ಟಣ ಪಂಚಾಯಿತಿ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಭಾನುವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಕೊನೆಯಾಗಿದೆ. 11 ವಾರ್ಡ್’ಗಳಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮತ್ತು ಸ್ವತಂತ್ರವಾಗಿ 43 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮನೆ ಮನೆ ಪ್ರಚಾರ ಆರಂಭವಾಗಿದ್ದು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಂಗಳವಾರ ಚುನಾವಣೆ ನಡೆಯಲಿದೆ.
NEWS 3 : ಗೋಂದಿಚಟ್ನಳ್ಳಿ : ಅಯೋಧ್ಯ ವಿವಾದ ಕುರಿತು ಸುಪ್ರೀಂಕೋರ್ಟ್ ತೀರ್ಪಿಗೆ ಸ್ವಾಗತ. ಶೀಘ್ರವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎಂದು ಶಿವಮೊಗ್ಗದ ಗೋಂದಿಚಟ್ನಹಳ್ಳಿ ಗ್ರಾಮಸ್ಥರಿಂದ ಶ್ರೀ ಕರಿಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ.
NEWS 4 : ತಾಳಗುಪ್ಪ : ಸಮೀಪದ ಬಚ್ಚಗಾರು ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಆರು ತಿಂಗಳ ಚಿರತೆ ಮರಿ ಸಾವನ್ನಪ್ಪಿದೆ. ಶನಿವಾರ ರಾತ್ರಿ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
NEWS 5 : ಶಿರಾಳಕೊಪ್ಪ : ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ 17 ವರ್ಷದೊಳಗಿನ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ನಡಿಗೆ ಸ್ಪರ್ಧೆಯಲ್ಲಿ ಬಿಳಿಕಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಆಕಾಶ್.ಎಸ್.ಎಂ, 9ನೇ ತರಗತಿಯ ಪಿ.ಬಿ.ಸ್ವಾತಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ.12ರಂದು ಮಂಡ್ಯದಲ್ಲಿ ರಾಜ್ಯಮಟ್ಟದ ಸ್ಪರ್ಧೆ ನಡೆಯಲಿದೆ.