ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020
ಸಾಮಾಜಿಕ ಜಾಲತಾಣ ಸ್ಪರ್ಧೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳನ್ನು ಹಿಂದಿಕ್ಕಿ, ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಕೊನೆ ಹಂತದವರೆಗೆ ಸ್ಪರ್ಧೆ ನೀಡಿದ್ದ ಮಂಡ್ಯ ಜಿಲ್ಲಾ ಪಂಚಾಯಿತಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಹಿಂದಿಕ್ಕಿದೆ.
ಏನಿದು ಸ್ಪರ್ಧೆ?
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿ ಫೇಸ್‍ಬುಕ್ ಪೇಜ್‍ಗಳ ಲೈಕ್ಸ್ ಹೆಚ್ಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಜುಲೈ 16 ರಿಂದ ಸೆಪ್ಟೆಂಬರ್ 15ರವರೆಗೆ ಸ್ಪರ್ಧೆ ಇತ್ತು. ಈ ಅವಧಿಯಲ್ಲಿ ಅತಿ ಹೆಚ್ಚು ಲೈಕ್ಸ್ ಗಳಿಸುವವರಿಗೆ ಬಹುಮಾನ ಘೋಷಿಸಲಾಗಿತ್ತು.
ಶಿವಮೊಗ್ಗ ನಂಬರ್ 1
ಸ್ಪರ್ಧೆಯ ಅವಧಿಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಫೇಸ್‍ಬುಕ್ ಪೇಜ್‍ಗೆ 18,354 ಲೈಕ್ಸ್ ಬಂದಿದೆ. ಮಂಡ್ಯ ಜಿಲ್ಲಾ ಪಂಚಾಯಿತಿ ಫೇಸ್‍ಬುಕ್ ಪೇಜ್‍ಗೆ 18,193 ಲೈಕ್ಸ್ ಬಂದಿವೆ. ಶಿವಮೊಗ್ಗ ಜಿಲ್ಲೆಯನ್ನು ನಂಬರ್ 1 ಎಂದು ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಘೋಷಿಸಿದೆ.
ಪ್ರಯೋಜನ ಏನು?
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳು, ಜಿಲ್ಲಾ ಪಂಚಾಯಿತಿಯ ವಿವಿಧ ಕಾರ್ಯಕ್ರಮಗಳು, ಯೋಜನೆಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವ ಉದ್ದೇಶದಿಂದ ಸ್ಪರ್ಧೆ ಆಯೋಜಿಸಲಾಗಿತ್ತು. ಎಲ್ಲಾ ಜಿಲ್ಲಾ ಪಂಚಾಯಿತಿ ಫೇಸ್‍ಬುಕ್ ಖಾತೆ ಮೂಲಕ ಇಲಾಖೆ ಕಾರ್ಯಕ್ರಮಗಳ ಪ್ರಚಾರ ಕಾರ್ಯ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200