ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020
ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಶಿವಮೊಗ್ಗದಲ್ಲಿ ಮೊದಲ ದಿನ ನೈಟ್ ಕರ್ಫ್ಯೂ ಬಗ್ಗೆ ಜನ ಕ್ಯಾರೆ ಅಂದಿರಲಿಲ್ಲ. ಆದರೆ ಇವತ್ತಿಂದ ಕರ್ಫ್ಯೂ ಬಿಗಿಯಾಗಲಿದೆ.
ಹೇಗಿತ್ತು ಮೊದಲ ದಿನದ ಕರ್ಫ್ಯೂ?
ಮೊದಲ ದಿನದ ನೈಟ್ ಕರ್ಫ್ಯೂಗೆ ಜನರ ಪ್ರತಿಕ್ರಿಯೆ ನೀರಸವಾಗಿತ್ತು. ವಾಹನ ಸಂಚಾರ ಎಂದಿನಂತೆಯೇ ಇತ್ತು. ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸರು ಅನೌನ್ಸ್ ಮಾಡುತ್ತಿದ್ದರೂ, ಕೆಲವು ಕಡೆ ಅಂಗಡಿ ಬಾಗಿಲು ತೆರೆದಿದ್ದವು.
ಇವತ್ತಿಂದ ಇನ್ನಷ್ಟು ಬಿಗಿ
ಮೊದಲ ದಿನವಾಗಿದ್ದರಿಂದ ಜನರಿಗೆ ನೈಟ್ ಕರ್ಫ್ಯೂ ಕುರಿತು ಜಾಗೃತಿಗಾಗಿ ಪೊಲೀಸರು ಸ್ವಲ್ಪ ರಿಲೀಫ್ ನೀಡಿದ್ದರು. ಪ್ರಮುಖ ಸರ್ಕಲ್‍ಗಳು, ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಒಂದು ಸೈಡ್‍ನಲ್ಲಿ ಮಾತ್ರ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದರು. ಆದರೆ ಇವತ್ತಿಂದ ಪೊಲೀಸರು ಬಿಗಿ ಕ್ರಮ ಕೈಗೊಳ್ಳಲಿದ್ದಾರೆ.
8 ಗಂಟೆಗೆ ಎಲ್ಲವು ಬಂದ್
ಶಿವಮೊಗ್ಗ ನಗರದಲ್ಲಿ ಇವತ್ತು 8 ಗಂಟೆಗೆ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತದೆ. ನೈಟ್ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಇನ್ನು ವಾಹನ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗುತ್ತದೆ. ತುರ್ತು ಅವಶ್ಯತೆ ಇದ್ದರಷ್ಟೇ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422