ಅರ್ಚಕ ವಿನಾಯಕ ಬಾಯರಿ ನಿಧನ | ನಾಳೆ ಜನತಾ ಪ್ರಣಾಳಿಕ ಬಿಡುಗಡೆ – 5 ಫಟಾಫಟ್‌ ಸುದ್ದಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

Fatafat News

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮೈತ್ರಾದೇವಿ ಯಡಿಯೂರಪ್ಪ ದತ್ತಿ ಕಾರ್ಯಕ್ರಮ

FATAFAT - #f1f1f1ಶಿವಮೊಗ್ಗ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಶಿಕಾರಿಪುರ ತಾಲೂಕು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ದತ್ತಿ ಕಾರ್ಯಕ್ರಮವನ್ನು ಮಾರ್ಚ್ 5ರ ಬೆಳಗ್ಗೆ 10.30ಕ್ಕೆ ಶಿಕಾರಿಪುರ ಪಟ್ಟಣದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.

ಮಾ.2ರಂದು ಜನತಾ ಪ್ರಣಾಳಿಕೆ ಬಿಡುಗಡೆ

FATAFAT - #f1f1f1ಶಿವಮೊಗ್ಗ : ನವ ಕರ್ನಾಟಕ ನಿರ್ಮಾಣ ಆಂದೋಲನ, ರೈತ ಚಳವಳಿ, ದಲಿತ ಚಳವಳಿ, ಕನ್ನಡ ಭಾಷಾ ಚಳವಳಿ, ಮಹಿಳಾ ಚಳವಳಿ, ವಿದ್ಯಾರ್ಥಿ – ಯುವಜನರ ಚಳವಳಿಗಳು ರೂಪಿಸಿರುವ ಪ್ರಾದೇಶಿಕ ರಾಜಕೀಯ ಪಕ್ಷದ ಜನತಾ ಪ್ರಣಾಳಿಕೆ ಬಿಡುಗಡೆ ಮತ್ತು ಚರ್ಚೆಯನ್ನು ಮಾರ್ಚ್ 2 ರಂದು ಬೆಳಗ್ಗೆ 10.30ಕ್ಕೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ಆಲ್ ಇಂಡಿಯ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ.ಶಿವಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏಝಾಜ್‌ ಪಾಷಾಗೆ ಅಭಿನಂದನೆ

FATAFAT - #f1f1f1ಶಿವಮೊಗ್ಗ : ನಗರದ ಶಂಕರ ಮಠ ರಸ್ತೆಯಲ್ಲಿನ ಉದಯ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾಗಿ ಜನಾಬ್ ಏಝಾಜ್ ಪಾಷ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುನ್ನಿ ಜಮೈತುಲ್ ಉಲ್ಮ ಕಮಿಟಿ ಕಾರ್ಯದರ್ಶಿಯೂ ಆಗಿರುವ ಏಝಾಜ್‌ ಪಾಷಾ ಅವರಿಗೆ  ಸುನ್ನಿ ಜಮೈತುಲ್ ಉಲ್ಮ ಕಮಿಟಿ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಅರ್ಚಕ ವಿನಾಯಕ ಬಾಯರಿ ನಿಧನ

FATAFAT - #f1f1f1ಶಿವಮೊಗ್ಗ : ಶುಭಮಂಗಳ ಕಲ್ಯಾಣ ಮಂಟಪದ ಪಕ್ಕದ ಶನಿಮಹಾತ್ಮ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ವಿನಾಯಕ ಬಾಯರಿ (47) ಇಂದು ನಿಧನರಾಗಿದ್ದಾರೆ. ಇಂದು ಸಂಜೆ ರೋಟರಿ ಚಿತಾಗಾರದಲ್ಲಿ ವಿನಾಯಕ ಬಾಯರಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಬೈಕ್‌ ಕ್ಲಬ್‌ನ ಸದಸ್ಯರಾಗಿದ್ದರು.

ವೀಣಾ ವಾರಿಧಿ ಬಿರುದು ನೀಡಿ ಸನ್ಮಾನ

FATAFAT - #f1f1f1ಶಿವಮೊಗ್ಗ : ಶಂಕರಮಠದಲ್ಲಿ ಅನಂತ ಸಂಗೀತ ಸಭಾದಿಂದ ತ್ಯಾಗರಾಜರು ಮತ್ತು ಪುರಂದರದಾಸರ ಆರಾಧನ ಕಾರ್ಯಕ್ರಮ ನಡೆಯಿತು. ವೀಣಾ ವಿದುಷಿ ವಿಜಯಲಕ್ಷ್ಮಿ ರಾಘು ಅವರಿಗೆ ವೀಣಾ ವಾರಿಧಿ ಬಿರುದು ನೀಡಿ ಸನ್ಮಾನಿಸಲಾಯಿತು. ಶಂಕರಮಠದ ಆಡಳಿತಾಧಿಕಾರಿ ಡಾ ಪಿ.ನಾರಾಯಣ್‌ ಅವರು ಸನ್ಮಾನಿಸಿದರು. ಕಲಾವಿದರಾದ ವಿವೇಕ ಕೃಷ್ಣ, ಮಧು ಮುರುಳಿ, ಅರವಿಂದ ಹೊಳ್ಳ, ಆನಂದರಾಮ್‌ ಭಟ್‌, ಪ್ರವೀಣ್‌, ಶ್ರೀನಿಧಿ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಭದ್ರಾವತಿ ಅಧಿಕಾರಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment