ಶಿವಮೊಗ್ಗ : ಓಮ್ನಿ ಕಾರಿನಲ್ಲಿ ಗಾಂಜಾ ಸಾಗಿಸಿದ್ದ ಆರೋಪ ಸಾಬೀತಾದ ಹಿನ್ನೆಲೆ ಭದ್ರಾವತಿಯ ಕಲ್ಲಹಳ್ಳಿಯ ಮುರುಗ ಎಂಬಾತನಿಗೆ ಶಿವಮೊಗ್ಗ ನ್ಯಾಯಾಲಯ (Court) ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.
ಆಂಧ್ರದಿಂದ ತರುತ್ತಿದ್ದ ಗಾಂಜಾ
ಮರುಗ ಎಂಬಾತ ಆಂಧ್ರದ ರಾಜಮಂಡ್ರಿಯಿಂದ 50 ಕೆ.ಜಿ 430 ಗ್ರಾಂ ತೂಕದ ಗಾಂಜಾವನ್ನು ಓಮ್ನಿ ಕಾರಿನಲ್ಲಿ ತರಲಾಗುತ್ತಿತ್ತು. 33 ಪ್ಯಾಕೆಟ್ ಮಾಡಿ ವ್ಯಾನ್ನ ಡಿಕ್ಕಿ ಮತ್ತು ತುಂಡಾದ ಪೆಟ್ರೋಲ್ ಟ್ಯಾಂಕಿನಲ್ಲಿ ತುಂಬಿಕೊಂಡು ತಂದಿದ್ದ. ಖಚಿತ ಮಾಹಿತಿ ಮೇರೆಗೆ ಸೊರಬ ವಲಯ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಗಾಂಜಾವನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿತ್ತು. ತನಿಖೆ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಕಠಿಣ ಜೈಲು ಶಿಕ್ಷೆ, ದಂಡ
ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (Court) ನ್ಯಾಯಾಧೀಶರಾದ ಮಂಜುನಾಥ್ ನಾಯಕ್, ಆರೋಪಿ ಮುರುಗನಿಗೆ ಶಿಕ್ಷೆ ಪ್ರಕಟಿಸಿದ್ದಾರೆ. 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ 2 ವರ್ಷ ಹೆಚ್ಚುವರಿ ಸಾಧಾರಣ ಸಜೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸುರೇಶ್ ಕುಮಾರ್.ಎ.ಎಮ್ ವಾದ ಮಂಡಿಸಿದ್ದರು.
ಇದನ್ನೂ ಓದಿ » ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಕುರಿತು ಷಡಾಕ್ಷರಿ ಮಹತ್ವದ ಹೇಳಿಕೆ, ಏನದು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200