ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020
ಕೋವಿಡ್ 19 ಲಾಕ್ ಡೌನ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಆತ್ಮನಿರ್ಭರ ಭಾರತ ಪ್ಯಾಕೇಜ್‍ನ ಪರಿಹಾರ ಈಗಾಗಲೇ ಶೇ.70ರಷ್ಟು ಫಲಾನುಭವಿಗಳಿಗೆ ತಲುಪಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನ ಪರಿಹಾರದ ಮೊತ್ತ ಶೇ.70ರಷ್ಟು ಫಲಾನುಭವಿಗಳಿಗೆ ತಲುಪಿದೆ. ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಕೇಂದ್ರದ ಪರಿಹಾರದಿಂದ ಲಾಭ ಪಡೆದುಕೊಂಡಿವೆ ಎಂದು ತಿಳಿಸಿದರು.
ಶಿವಮೊಗ್ಗ 107 ಕೋಟಿ ರೂ.
ಶಿವಮೊಗ್ಗದಲ್ಲಿ 32 ಬ್ಯಾಂಕ್‍ಗಳ ಮೂಲಕ 5100 ಖಾತೆದಾರರಿಗೆ 107 ಕೋಟಿ ರೂ. ಪರಿಹಾರದ ಹಣ ಬಂದಿದೆ ಎಂದು ಸಂಸದ ರಾಘವೇಂದ್ರ ಸ್ಪಷ್ಟಪಡಿಸಿದರು. 4.58 ಲಕ್ಷ ಜನ್ ಧನ್ ಬ್ಯಾಂಕ್ ಖಾತೆದಾರರು ಕೇಂದ್ರ ಸರ್ಕಾರದ ನೆರವು ಪಡೆದುಕೊಳ್ಳಲು ಸಾದ್ಯವಾಗಿದೆ ಎಂದು ತಿಳಿಸಿದರು.
ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ದತ್ತಾತ್ರಿ, ಎಪಿಎಂಸಿ ಮಾಜಿ ಅಧ್ಯಕ್ಷ ಜ್ಯೋತಿ ಪ್ರಕಾಶ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಪ್ರಮುಖರಾದ ಗಿರೀಶ್ ಪಟೇಲ್, ಮಾಲತೇಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]