ಶಿವಮೊಗ್ಗದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ, ಯಾವಾಗ? ಎಲ್ಲಿ ನಡೆಯಲಿದೆ?

 ಶಿವಮೊಗ್ಗ  LIVE 

ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪ್ರಿಯದರ್ಶಿನಿ ಪ್ರೌಢಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜ.1 ರಂದು ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ತಾಲ್ಲೂಕು ಮಟ್ಟದ 12 ನೇ ಮಕ್ಕಳ ಸಾಹಿತ್ಯ ಸಮ್ಮೇಳನ (Literary Meet) ಆಯೋಜಿಸಲಾಗಿದೆ.

ಇದನ್ನೂ ಓದಿ » ಭರ್ಜರಿ ಪಾರ್ಟಿಗೆ ರೆಡಿಯಾದ ಶಿವಮೊಗ್ಗ, ಹೊಸ ವರ್ಷಾಚರಣೆಗೆ ಎಲ್ಲೆಲ್ಲಿ ಹೇಗಿದೆ ಸಿದ್ಧತೆ?

ಅಂದು ಬೆಳಿಗ್ಗೆ 10.30 ಕ್ಕೆ ಉದ್ಘಾಟನಾ ಸಮಾರಂಭ ಇರಲಿದೆ. ಜಾವಳ್ಳಿಯ ಜ್ಞಾನದೀಪ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಪಿ.ಬಿ.ಶ್ರೀಕಾಂತ ಅಧ್ಯಕ್ಷತೆ ವಹಿಸಲಿದ್ದಾರೆ. ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ತಮ್ಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜೆ.ಹಂಸಿಕಾ ಉದ್ಘಾಟಿಸಲಿದ್ದಾರೆ. ವೇದಿಕೆ ಅಧ್ಯಕ್ಷ ಡಿ.ಮಂಜುನಾಥ ಆಶಯ ನುಡಿಗಳನ್ನಾಡಲಿದ್ದಾರೆ.

ಅತಿಥಿಗಳಾಗಿ ಬಿಇಒ ಎಸ್.ರಮೇಶ್, ಪ್ರಿಯದರ್ಶಿನಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎನ್. ರಮೇಶ್, ಕಸಾಪ ತಾಲೂಕು ಘಟಕದ ಅಧ್ಯಕ್ಷೆ ಮಹಾದೇವಿ, ಸನ್ ಸಿಟಿ ಸಂಸ್ಥೆ ಕಾರ್ಯದರ್ಶಿ ಎನ್. ಬಸಪ್ಪ, ವಿದ್ಯಾವರ್ಧಕ ಪಬ್ಲಿಕ್ ಸ್ಕೂಲ್ ಸಂಸ್ಥೆ ಕಾರ್ಯದರ್ಶಿ ತಾನೋಜಿರಾವ್, ಶಿವಮೊಗ್ಗ ಪಬ್ಲಿಕ್ ಸ್ಕೂಲ್ ಸಂಸ್ಥೆ ಅಧ್ಯಕ್ಷ ಮೊಹಮ್ಮದ್ ಅನ್ವರ್ ಭಾಗವಹಿಸಲಿದ್ದಾರೆ.

D-Manjunatha-about-kannada-shahitya-sammelana

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ ಕೆ.ವಿ.ಪ್ರಣವಿ ವಹಿಸಲಿದ್ದಾರೆ. ಕಥಾಗೋಷ್ಠಿಯಲ್ಲಿ ಪಿಇಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಅಮೋಘ ಜಿ. ಅಡೇರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Literary Meet

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment