ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020
ಜಿಲ್ಲೆಯಲ್ಲಿ ಇದುವರೆಗೆ 13 ಲಕ್ಷ ಜನರ ಆರೋಗ್ಯ ತಪಾಸಣಾ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ಇವತ್ತಿನಿಂದ ಬಿಎಲ್‍ಒ (ಮತಗಟ್ಟೆ ಅಧಿಕಾರಿ) ತಮ್ಮ ವ್ಯಾಪ್ತಿಯಲ್ಲಿ ಬಾಕಿಯುಳಿದಿರುವ ಮನೆಗಳ ಆರೋಗ್ಯ ಸಮೀಕ್ಷೆ ಕಾರ್ಯವನ್ನು ನಡೆಸಬೇಕು ಅಂತಾ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಆರೋಗ್ಯ ಸಮಿತಿ ಸಭೆಯಲ್ಲಿ ಈ ಕುರಿತು ಸೂಚನೆ ನೀಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಆಶಾ ಕಾರ್ಯಕರ್ತೆಯರು ಇದುವರೆಗೆ ನಗರ ವ್ಯಾಪ್ತಿಯಲ್ಲಿ 1.28 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಳಿಸಿದ್ದು, 5.16ಲಕ್ಷ ಜನರ ಆರೋಗ್ಯ ಸಮೀಕ್ಷೆ ಕೈಗೊಂಡಿದ್ದಾರೆ. ಇವರ ಪೈಕಿ 168 ಮಂದಿಯ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ 1.78 ಲಕ್ಷ ಮನೆಗಳಿಗೆ ಭೇಟಿ ನೀಡಿ 7.64 ಲಕ್ಷ ಜನರ ಆರೋಗ್ಯ ಸಮೀಕ್ಷೆ ನಡೆಸಲಾಗಿದೆ. ಒಟ್ಟು 77 ಮಂದಿಯ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕಾರ್ಯವನ್ನು ಮತಗಟ್ಟೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡು ಪ್ರತಿದಿನ ವರದಿಯನ್ನು ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422