SHIVAMOGGA LIVE NEWS | 16 ಮಾರ್ಚ್ 2022
ಹಿಜಾಬ್ ವಿವಾದ ಕುರಿತು ಹೈರ್ಕೋರ್ಟ್ ತೀರ್ಪು ಹಿನ್ನೆಲೆ, ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಮಧ್ಯೆ ಇವತ್ತು ಶಾಲೆ, ಕಾಲೇಜುಗಳು ಪುನಾರಂಭವಾಗುತ್ತಿವೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಮಾರ್ಚ್ 21ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಐದು ಜನ ಅಥವಾ ಅದಕ್ಕಿಂತಲೂ ಹೆಚ್ಚಿನ ಜನರು ಗುಂಪುಗೂಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಶಾಲೆ, ಕಾಲೇಜು ಪುನಾರಂಭ
ಹೈಕೋರ್ಟ್ ತೀರ್ಪು ಹಿನ್ನೆಲೆ ಮಾರ್ಚ್ 15ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇವತ್ತು ಶಾಲೆ, ಕಾಲೇಜು ಪುನಾರಂಭವಾಗಲಿದೆ.
ಶಾಲೆ, ಕಾಲೇಜು ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ ಆಯಾ ಶಾಲೆ, ಕಾಲೇಜಿಗೆ ಸಂಬಂಧಿಸಿದ ಸಿಬ್ಬಂದಿ, ವಿದ್ಯಾರ್ಥಿಗಳು ಹೊರತು ಬೇರೆಯವರಿಗೆ ನಿರ್ಬಂಧ ವಿಧಿಸಲಾಗಿದೆ. ಒಂದು ಶಾಲೆ, ಕಾಲೇಜಿನ ವಿದ್ಯಾರ್ಥಿಗಳು ಮತ್ತೊಂದು ಶಾಲೆ, ಕಾಲೇಜಿನ ಆವರಣಕ್ಕೆ ಹೋಗುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳ ಬಳಿ ಬಂದೋಬಸ್ತ್
ಇನ್ನು, ಶಿವಮೊಗ್ಗ ಜಿಲ್ಲೆಯಾದ್ಯಂತ ಶಿಕ್ಷಣ ಸಂಸ್ಥೆಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಹಿತಕರ ಘಟನೆ ತಡೆಯಲು DAR, KSRP, RAF ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200