SHIVAMOGGA LIVE NEWS | 4 OCTOBER 2023
SHIMOGA : ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆ ರಾಗಿ ಗುಡ್ಡ (ragi gudda) ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲಾ, ಕಾಲೇಜು, ಕಚೇರಿಗೆ ತೆರಳಲು ಜನರು ಮನೆಯಿಂದ ಹೊರಗೆ ಬರುತ್ತಿದ್ದಾರೆ. ಆದರೆ ಸೆಕ್ಷನ್ 144ರ (144 Section) ಅನ್ವಯ ನಿಷೇಧಾಜ್ಞೆ ಮುಂದುವರೆದಿದೆ.
![]() |
ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡ ಬಡಾವಣೆಯಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಹಿತಕರ ಘಟನೆ ತಡೆಯಲು ಜನರು ಮನೆಯಿಂದ ಹೊರಗೆ ಬಾರದಂತೆ ಪೊಲೀಸರು ನಿರ್ಬಂಧಿಸಿದ್ದರು. ಈಗ ರಾಗಿಗುಡ್ಡ ಸಹಜ ಸ್ಥಿತಿಗೆ ಮರಳುತ್ತಿದೆ.
ಇದನ್ನೂ ಓದಿ- ರಾಗಿಗುಡ್ಡದಲ್ಲಿ ಕಟೌಟ್ ವಿಚಾರವಾಗಿ ಗೊಂದಲ, ಸ್ಥಳಕ್ಕೆ ಎಸ್‌ಪಿ ಭೇಟಿ, ಪರಿಸ್ಥಿತಿ ಶಾಂತ, ಏನೇನಾಯ್ತು?
ಶಾಲೆ, ಕಾಲೇಜು, ಕಚೇರಿಯತ್ತ
ರಾಗಿಗುಡ್ಡ ಬಡಾವಣೆಯಲ್ಲಿ ಸುಖಾಸುಮ್ಮನೆ ಜನರ ಓಡಾಟಕ್ಕೆ ಈಗಲು ನಿರ್ಬಂಧವಿದೆ. ಆದರೆ ಶಾಲೆ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ, ಕೆಲಸಗಳಿಗೆ ತೆರಳುವವರಿಗೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿ ಮುಂಗಟ್ಟು ತೆರೆದಿದ್ದು ಅಗತ್ಯ ವಸ್ತುಗಳ ಖರೀದಿ ಮಾಡಲಾಗುತ್ತಿದೆ. ನಿಧಾನವಾಗಿ ರಾಗಿಗುಡ್ಡ ಬಡಾವಣೆ ಸಹಜ ಸ್ಥಿತಿಗೆ ಮರಳುತ್ತಿದೆ.
ಇದನ್ನೂ ಓದಿ- ‘ಶಿವಮೊಗ್ಗದಲ್ಲಿ ಧಗ ಧಗ, ಕೊತ ಕೊತ ಇಲ್ಲ’, ಕಲ್ಲು ತೂರಾಟ ಕೇಸ್‌ನಲ್ಲಿ ಈತನಕ ಅರೆಸ್ಟ್ ಆದವರೆಷ್ಟು?
ಮುಂದುವರೆದ ಬಂದೋಬಸ್ತ್
ಇನ್ನು, ನಿಷೇಧಾಜ್ಞೆ ಜಾರಿಯಲ್ಲಿ ಇರುವುದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ. ಕೆಎಸ್‌ಆರ್‌ಪಿ ಮತ್ತು ಡಿಎಆರ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ರಾಗಿಗುಡ್ಡ ಬಡಾವಣೆಗೆ ಪ್ರವೇಶಿಸುವ ಪ್ರತಿ ವಾಹನವನ್ನು ತಪಾಸಣೆ ಮಾಡಲಾಗುತ್ತಿದೆ. ಸುಖಾಸುಮ್ಮನೆ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200