ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ಹಿಜಾಬ್, ಕೇಸರಿ ಶಾಲು ಸಂಘರ್ಷದ ಬಳಿಕ ಶಿವಮೊಗ್ಗದಲ್ಲಿ ಕಾಲೇಜುಗಳು ಪುನಾರಂಭವಾಗುತ್ತಿವೆ. ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಡಾ.ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ನಗರದಾದ್ಯಂತ ಫೆಬ್ರವರಿ 16ರ ಬೆಳಗ್ಗೆ 6 ಗಂಟೆಯಿಂದ ಫೆಬ್ರವರಿ 19ರ ರಾತ್ರಿ 9 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಹೈಕೋರ್ಟ್ ಮಧ್ಯಂತರ ತೀರ್ಪು ಪಾಲಿಸಿ
» ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ, ಧರ್ಮ ಸೂಚಕ ವಸ್ತ್ರಗಳನ್ನು ಧರಿಸುವುದು, ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ. ಹೈಕೋರ್ಟ್ ಮಧ್ಯಂತರ ತೀರ್ಪನ್ನು ಪಾಲಿಸಬೇಕು.
» ಯಾವುದೆ ಸಂಘಟನೆಗಳು ವಿದ್ಯಾರ್ಥಿಗಳ ಸಂಘಟನೆ ಮಾಡುವುದು, ಪ್ರಚೋದಿಸುವುದು ಕೂಡ ನಿಷೇಧಿಸಲಾಗಿದೆ.
» ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್, ಕೇಸರಿ ಶಾಲು ಕುರಿತು ಯಾವುದೆ ರೀತಿಯ ಚರ್ಚೆ ನಡೆಸುವಂತಿಲ್ಲ.
» ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕ ಸ್ಥಳದಲ್ಲಿ ಐದು ಅಥವಾ ಅದಕ್ಕಿಂತಲೂ ಹೆಚ್ಚಿನ ಜನರು ಸೇರುವುದನ್ನು ನಿರ್ಬಂಧಿಸಲಾಗಿದೆ.
ಇದನ್ನೂ ಓದಿ | ‘ಪರೀಕ್ಷೆಗಿಂತಲೂ ಹಿಜಾಬ್ ಮುಖ್ಯ’, ಶಿವಮೊಗ್ಗದಲ್ಲಿ ಇವತ್ತೂ ಪರೀಕ್ಷೆ ತ್ಯಜಿಸಿದ ವಿದ್ಯಾರ್ಥಿನಿಯರು
ಇದನ್ನೂ ಓದಿ | ನಾಳೆಯಿಂದ ಕಾಲೇಜುಗಳು ಪುನಾರಂಭ, ಹೇಗಿದೆ ಸಿದ್ಧತೆ? ಎಷ್ಟಿದೆ ಬಂದೋಬಸ್ತ್?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422