BREAKING NEWS | ಮತ್ತೆ ವಿಸ್ತರಣೆಯಾಯ್ತು ನಿಷೇಧಾಜ್ಞೆ, ಬೈಕ್ ಸವಾರರು, ಅಂಗಡಿ ಮಾಲೀಕರಿಗೆ ರಿಲೀಫ್

 SHIVAMOGGA LIVE NEWS 

ಶಿವಮೊಗ್ಗ| ಸಾವರ್ಕರ್ ಫ್ಲೆಕ್ಸ್ ವಿವಾದದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ (SHIMOGA CITY) ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು (SECTION 144) ಶಿವಮೊಗ್ಗ ತಾಲೂಕಿಗೆ ವಿಸ್ತರಣೆ ಮಾಡಲಾಗಿದೆ. ಶಿವಮೊಗ್ಗ ತಾಲೂಕಿನಾದ್ಯಂತ ಆ.23ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಸದ್ಯ ಶಿವಮೊಗ್ಗ ನಗರದಲ್ಲಿ ಶಾಂತಿಯುತ ವಾತಾವರಣವಿದೆ. ಆದರೂ ಮುಂಜಾಗ್ರತ ಕ್ರಮವಾಗಿ ತಾಲೂಕಿನಾದ್ಯಂತ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

Shimoga Nanjappa Hospital

ಶಿವಮೊಗ್ಗ ತಾಲೂಕಿನಾದ್ಯಂತ ಆ.23ರ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144ರ (SECTION 144) ಅನ್ವಯ ನಿಷೇಧಾಜ್ಞೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ವಿಸ್ತರಣೆ ಆಗುತ್ತಾ ನಿಷೇಧಾಜ್ಞೆ, ಎಡಿಜಿಪಿ ಹೇಳಿದ್ದೇನು?

Kalleshwara-Enterprises.webp

40 ವರ್ಷಕ್ಕಿಂತಲೂ ಕಡಿಮೆ ವಯಸ್ಸಿನ ಇಬ್ಬರು ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವಂತಿಲ್ಲ ಎಂಬ ನಿಯಮವನ್ನು ಹಿಂದಕ್ಕೆ ಪಡೆಯಲಾಗಿದೆ. ಇನ್ನು, ವ್ಯಾಪಾರ ವಹಿವಾಟಿಗೆ ರಾತ್ರಿ 9 ಗಂಟೆ ಬದಲಿಗೆ ರಾತ್ರಿ 10 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. ಸಿನಿಮಾ ಪ್ರದರ್ಶನಕ್ಕೂ ರಾತ್ರಿ 10 ಗಂಟೆವರೆಗೆ ಅವಕಾಶವಿದೆ.

ಇದನ್ನೂ ಓದಿ – ಸಾವರ್ಕರ್ ಫ್ಲೆಕ್ಸ್ ಕಿತ್ತೊಗೆದವರ ಮೇಲಷ್ಟೆ ಅಲ್ಲ, ಹಾಕಿದವರ ಮೇಲೂ ಬಿತ್ತು ಕೇಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment