ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022
ನಿಷೇಧಾಜ್ಞೆ ಸಡಿಲಿಕೆ ಅವಧಿ ಪೂರ್ಣಗೊಂಡ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಅಂಗಡಿಗಳ ಬಾಗಿಲು ಬಂದ್ ಮಾಡಿಸಲಾಯಿತು. ಸಂಜೆ 4 ಗಂಟೆ ಬಳಿಕ ಎಲ್ಲಾ ವ್ಯಾಪಾರ, ವಹಿವಾಟಿಗೆ ನಿರ್ಬಂಧ ವಿಧಿಸಲಾಯಿತು.
ಗಾಂಧಿ ಬಜಾರ್, ಬಿ.ಹೆಚ್.ರಸ್ತೆ, ನೆಹರೂ ರಸ್ತೆ, ದುರ್ಗಿಗುಡಿ ಸೇರಿದಂತೆ ವಿವಿಧೆಡೆ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು. ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸರು ಮೈಕ್ ಮೂಲ ಮಾಹಿತಿ ನೀಡಿದರು.
ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಿಷೇಧಾಜ್ಞೆ ಸಡಿಲಿಕೆ ಮಾಡಲಾಗಿತ್ತು. ಭಾನುವಾರವು ಅಗತ್ಯ ವಸ್ತುಗಳ ಖರೀದಿಗೆ ಇದೆ ಸಮಯ ನಿಗದಿ ಮಾಡಲಾಗಿದೆ.