ಸರ್ಕಾರಕ್ಕೆ 15 ದಿನದ ಗಡುವು ನೀಡಿದ ಸಿಗಂದೂರು ಹೋರಾಟ ಸಮಿತಿ, ಗಡುವು ಏಕೆ? ಮುಂದಿನ ನಡೆ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020

ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ರಚಿಸಿರುವ ಸಮಿತಿಯನ್ನು ಹದಿನೈದು ದಿನದಲ್ಲಿ ಕೈಬಿಡಬೇಕು. ಇಲ್ಲವಾದರೆ ದೊಡ್ಡ ಮಟ್ಟದ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.

ಶಿವಮೊಗ್ಗದ ಈಡಿಗರ ಸಮುದಾಯ ಭವನದಲ್ಲಿ ನಡೆದ ಸಿಗಂದೂರು ದೇವಸ್ಥಾನ ಉಳಿಸಿ ಹೋರಾಟ ಸಮಿತಿಯ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಸರ್ಕಾರ ತನ್ನ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುತ್ತದೆ. ಈ ಸಂಬಂಧ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರೊಂದಿಗೆ ಹೋರಾಟದ ರೂಪುರೇಷೆ ಕುರಿತು ಚರ್ಚಿಸುತ್ತೇವೆ ಎಂದರು.

VIDEO REPORT

ಸರ್ವ ಜಾತಿ, ಸಮುದಾಯದವರು ಭಾಗಿ

ಹೋರಾಟ ಸಮಿತಿ ಸಭೆಯಲ್ಲಿ ಇವತ್ತು ಪ್ರಮುಖ ಸಂಘಟನೆಗಳು, ಜಾತಿ ಸಂಘಟನೆಗಳ ಮುಖಂಡರು, ಸದಸ್ಯರು ಪಾಲ್ಗೊಂಡಿದ್ದರು. ಎಲ್ಲರ ಅಭಿಪ್ರಾಯ ಪಡೆದ ಸಮಿತಿ ಮುಖಂಡರು, ಹೋರಾಟ ಮತ್ತು ಗುಡುವಿನ ಕುರಿತು ಅಂತಿಮ ನಿರ್ಣಯ ಕೈಗೊಂಡರು.

ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಧು ಬಂಗಾರಪ್ಪ, ಶಾರದಾ ಪೂರ್ಯನಾಯ್ಕ್, ಈಡಿಗರ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್, ಪ್ರಮುಖರಾದ ಸತ್ಯಜಿತ್ ಸೂರತ್ಕಲ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

123493873 998802700599640 796819790697253658 o.jpg? nc cat=100&ccb=2& nc sid=8bfeb9& nc ohc=CnOGTDhCaUIAX l8VMu& nc ht=scontent.fblr11 1

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment