Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಜಿಲ್ಲೆಯಾದ್ಯಂತ ಶೇ.20ರಷ್ಟು ಮಳೆ ಹೆಚ್ಚಳ, 163 ಗ್ರಾಮ, 18 ಮುಖ್ಯ ರಸ್ತೆಯಲ್ಲಿ ಅತಿವೃಷ್ಟಿ ಸಂಭವ

ಶಿವಮೊಗ್ಗ ಜಿಲ್ಲೆಯಾದ್ಯಂತ ಶೇ.20ರಷ್ಟು ಮಳೆ ಹೆಚ್ಚಳ, 163 ಗ್ರಾಮ, 18 ಮುಖ್ಯ ರಸ್ತೆಯಲ್ಲಿ ಅತಿವೃಷ್ಟಿ ಸಂಭವ

19/06/2021 6:16 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JUNE 2021

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಮುಂಗಾರು ಮಳೆ ಹಿನ್ನೆಲೆ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಕುರಿತು ಮುಖ್ಯಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್‍ನಲ್ಲಿ  ಭಾಗವಹಿಸಿದ ಜಿಲ್ಲಾಧಿಕಾರಿ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಶೇ.20ರಷ್ಟು ಹೆಚ್ಚು ಮಳೆ

ಜಿಲ್ಲೆಯಲ್ಲಿ ಕಳೆದ 18 ದಿನಗಳಲ್ಲಿ ಸರಾಸರಿಗಿಂತ ಶೇ.20ರಷ್ಟು ಹೆಚ್ಚಿನ ಮಳೆಯಾಗಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಕಳೆದ ಒಂದು ವಾರದಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ತುಂಗಾಭದ್ರಾ ಜಲಾಶಯ ಬಹುತೇಕ ತುಂಬಿದೆ. ಎಲ್ಲಾ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ನಿರಂತರ ನಿಗಾ ವಹಿಸಲಾಗಿದೆ. 67 ಗ್ರಾಮ ಪಂಚಾಯತ್‍ಗಳ 163 ಗ್ರಾಮಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 74 ಪ್ರದೇಶಗಳು ಹಾಗೂ 18 ಮುಖ್ಯ ರಸ್ತೆಗಳನ್ನು ಅತಿವೃಷ್ಟಿಯಿಂದ ತೊಂದರೆ ಉಂಟಾಗಬಹುದಾದ ಸ್ಥಳಗಳೆಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಆರಂಭಿಸಲಾಗಿದೆ ಎಂದು ಹೇಳಿದರು.

Nammur News For Website 2 1 1 1

ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ

ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆ ಇರುವುದಿಲ್ಲ. 26459 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದ್ದು, 30242 ಕ್ವಿಂಟಾಲ್ ದಾಸ್ತಾನಿದೆ. ಎಲ್ಲಾ ಕಡೆ ಕೃಷಿ ಚಟುವಟಿಕೆ ಆರಂಭವಾಗಿದ್ದು, ಈಗಾಗಲೇ 3341 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ರಸಗೊಬ್ಬರವನ್ನು ಬೇಡಿಕೆಗೆ ಅನುಸಾರವಾಗಿ ಹಂತ ಹಂತವಾಗಿ ದಾಸ್ತಾನು ಮಾಡಲಾಗುತ್ತಿದೆ. ಜೂನ್ ಅಂತ್ಯದವರೆಗೆ 52ಸಾವಿರ ಮೆಟ್ರಿಕ್ ಟನ್ ವಿವಿಧ ರಸಗೊಬ್ಬರ ಬೇಡಿಕೆ ಇದ್ದು, 1.07 ಮೆ.ಟನ್ ದಾಸ್ತಾನಿದೆ ಎಂದು ತಿಳಿಸಿದರು.

201421733 1138954733251102 9013304741762151542 n.jpg? nc cat=110&ccb=1 3& nc sid=8bfeb9& nc ohc=9tJivDm38zIAX W2r9 & nc ht=scontent.fblr20 1

ಮಳೆಯಿಂದ ಜೀವ ಹಾನಿ, ಮನೆ ಹಾನಿ

ಪ್ರಸ್ತುತ ಸಾಲಿನಲ್ಲಿ ಮಳೆಯಿಂದ 3 ಮಾನವ ಜೀವ ಹಾನಿ ಸಂಭವಿಸಿದ್ದು, 15 ಲಕ್ಷ ರೂ. ಪರಿಹಾರ ನೀಡಲಾಗಿದೆ. 2 ಜಾನುವಾರುಗಳು ಮೃತಪಟ್ಟಿದ್ದು 60 ಸಾವಿರ ರೂ. ನೀಡಲಾಗಿದೆ. 4 ಮನೆಗಳು ಶೇ.75ರಷ್ಟು ಹಾಗೂ 69 ಮನೆಗಳು ಸ್ವಲ್ಪಮಟ್ಟಿನ ಹಾನಿಗೀಡಾಗಿದ್ದು ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಡಿಸಿ ಖಾತೆಗೆ ಅನುದಾನ ಬಿಡುಗಡೆ

ಅತಿವೃಷ್ಟಿಯಿಂದ ಮಾನವ ಜೀವ ಹಾನಿ ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಗರಿಷ್ಟ ಎಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಸಾಕಷ್ಟು ಮೇವು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ವ್ಯವಸ್ಥೆ ಮಾಡಬೇಕು. ಅತಿವೃಷ್ಟಿ ಪರಿಹಾರ ಕಾಮಗಾರಿಗಳಿಗೆ ಯಾವುದೇ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳಲಾಗಿದ್ದು, ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

200051479 1410448692649880 8212638646280116184 n.jpg? nc cat=108&ccb=1 3& nc sid=8bfeb9& nc ohc=uizX3KBub1UAX u2fG9& nc ht=scontent.fblr20 1

ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ [email protected]

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live-New

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 190621 Nagodu Highway Road Blocked due to rain 1 ಭಾರಿ ಮಳೆಗೆ ನಾಗೋಡಿ ಘಾಟಿಯಲ್ಲಿ ರಸ್ತೆ ಕುಸಿತ, ವಾಹನ ಸಂಚಾರ ಸ್ಥಗಿತ, ಪರ್ಯಾಯ ಮಾರ್ಗ ಯಾವುದು ಗೊತ್ತಾ?
Next Article breaking news graphics ರಾಜ್ಯಾದ್ಯಂತ ಹೊಸ ಅನ್ ಲಾಕ್ ರೂಲ್ಸ್, ಯಾವ್ಯಾವ ಜಿಲ್ಲೆಯಲ್ಲಿ ಹೇಗಿರುತ್ತೆ ಸಡಿಲಿಕೆ? ಶಿವಮೊಗ್ಗದ ಸ್ಥಿತಿ ಏನು?

ಇದನ್ನೂ ಓದಿ

Mukya-Pustaka-barahagarru-press-meet
SHIVAMOGGA CITY

ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
MLA-channabasappa-visit-Vidyanagara-Health-Centre.
SHIVAMOGGA CITY

ವಿದ್ಯಾನಗರ ಆರೋಗ್ಯ ಕೇಂದ್ರಕ್ಕೆ ಎಂಎಲ್‌ಎ ದಿಢೀರ್‌ ಭೇಟಿ, ಸ್ಥಳೀಯ ಬಡಾವಣೆಗಳ ನಿವಾಸಿಗಳ ಜೊತೆ ಚರ್ಚೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Sahyadri-Narayana-Multispeciality-hospital-NH-Hospital.
SHIVAMOGGA CITY

ಶಿವಮೊಗ್ಗದ NH ಆಸ್ಪತ್ರೆಯಲ್ಲಿ ಸರ್ವೈವರ್ಸ್‌ ಕ್ಲಿನಿಕ್‌, ಜು.17ರಂದು ಕ್ಯಾನ್ಸರ್‌ ಬಗ್ಗೆ ಮಹತ್ವದ ಚರ್ಚೆ, ಏನಿದು ಕ್ಲಿನಿಕ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
MP-BY-raghavendra-about-Shimoga-Airport-Flight
SHIVAMOGGA CITY

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಪಕರಣ ತರಿಸಿ 15 ದಿನವಾಯ್ತು, ಅಳವಡಿಸಿಲ್ಲ’, ರಾಘವೇಂದ್ರ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Sigandur-Launch-in-Sharavathi-River
SHIVAMOGGA CITY

ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Police-nabbed-two-in-a-layout-at-Shimoga
CRIME DIARYSHIVAMOGGA CITY

ಶಿವಮೊಗ್ಗದ ಲೇಔಟ್‌ ಮೇಲೆ ಪೊಲೀಸ್‌ ರೇಡ್‌, ಗಾಂಜಾ ಪ್ಯಾಕಿಂಗ್‌ ಮಾಡ್ತಿದ್ದ ಇಬ್ಬರು ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?