ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 9 NOVEMBER 2024 : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಜೈಲು (Jail) ಶಿಕ್ಷೆ ಹಾಗೂ 1.12 ಲಕ್ಷ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮೋಹನ್ ಜೆ.ಎಸ್. ಅವರು ಆದೇಶ ನೀಡಿದ್ದಾರೆ.
ದಂಡ ಕಟ್ಟಲು ವಿಫಲವಾದಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪರಿಹಾರ ರೂಪವಾಗಿ ದಂಡದ ಮೊತ್ತದಲ್ಲಿ 1 ಲಕ್ಷ ರೂ. ಮತ್ತು ಸರ್ಕಾರದಿಂದ 5 ಲಕ್ಷ ರೂ.ವನ್ನು ನೊಂದ ಬಾಲಕಿಗೆ ನೀಡಲು ನ್ಯಾಯಾಧೀಶರು ಗುರುವಾರ ಆದೇಶಿಸಿದ್ದಾರೆ.
2023ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ 30 ವರ್ಷದ ವ್ಯಕ್ತಿಯು 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿಯ ನ್ಯೂ ಟೌನ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ » ಶಿವಮೊಗ್ಗದ ಯುವತಿಗೆ ಮುಂಬೈ ಪೊಲೀಸರಿಂದ ಫೋನ್, ಆಮೇಲೆ ಕಾದಿತ್ತು ದೊಡ್ಡ ಶಾಕ್
ಪ್ರಕರಣದ ತನಿಖಾಧಿಕಾರಿ ಸಿಪಿಐ ಶ್ರೀಶೈಲ್ ಕುಮಾರ್ ಜೆ. ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಕೀಲ ಶ್ರೀಧರ್ ಎಚ್.ಆರ್. ವಾದ ಮಂಡಿಸಿದ್ದರು.
![]()
A 30-year-old man gets 20 years jail & fined ₹1.12 lakh for sexually assaulting a 14-year-old girl in Bhadravati, Karnataka.
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















