ದಾವಣಗೆರೆ ಯುವಕನಿಗೆ ಶಿವಮೊಗ್ಗ ನ್ಯಾಯಾಲಯದಿಂದ 20 ವರ್ಷ ಜೈಲು ಶಿಕ್ಷೆ ಪ್ರಕಟ, ಕಾರಣವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 25 JANUARY 2024

SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ದಾವಣಗೆರೆ ಯುವಕನಿಗೆ ಶಿವಮೊಗ್ಗ ನ್ಯಾಯಾಲಯವು 20 ವರ್ಷ ಕಠಿಣ ಜೈಲು ಶಿಕ್ಷೆ, 2.20 ಲಕ್ಷ ರೂ. ದಂಡ ವಿಧಿಸಿದೆ. 2021ರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು.

ದಂಡ ಕಟ್ಟಲು ವಿಫಲವಾದಲ್ಲಿ ಅಪರಾಧಿಗೆ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸುವಂತೆ ತೀರ್ಪು ನೀಡಲಾಗಿದೆ. ಅಪರಾಧಿಯ ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಪರಿಹಾರವಾಗಿ 2 ಲಕ್ಷ ರೂ. ನೀಡುವಂತೆ ಆದೇಶಿಸಲಾಗಿದೆ. ಪ್ರಕರಣದ ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಚೈತನ್ಯ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೋಹನ್‌ ಜೆ.ಎಸ್‌ ಅವರು ಆರೋಪಿಗೆ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕರಾದ ಹರಿಪ್ರಸಾದ್‌ ಮತ್ತು ಶ್ರೀಧರ್‌ ವಾದಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ ಒಳಗೆ ಹೆಡೆ ಎತ್ತಿದ ನಾಗರ ಹಾವು

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment