ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021
ಶಿವಮೊಗ್ಗದಲ್ಲಿ ನಾಡದೇವಿ ಚಾಮುಂಡೇಶ್ವರಿಯ ವೈಭವದ ರಾಜಬೀದಿ ಮೆರವಣಿಗೆ ಆರಂಭವಾಗಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂದೆ ನಂದಿ ಕೋಲಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನಿಡಲಾಯಿತು.
ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಾಲಿಕೆ ಸದಸ್ಯರು, ಅಧಿಕಾರಿಗಳು ನಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಲಾರಿ ಮೇಲೆ ಅಂಬಾರಿ
ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಗೆ ಹೂವು ಹಾಕಿ ನಮನ ಸಲ್ಲಿಸಲಾಯಿತು. ಈ ಭಾರಿ ಲಾರಿಯಲ್ಲಿ ನಾಡದೇವಿಯ ಮೆರವಣಿಗೆ ನಡೆಸಲಾಗುತ್ತಿದೆ. ಸಕ್ರೆಬೈಲು ಬಿಡಾರದಿಂದ ಬಂದಿರುವ ಸಾಗರ ಮತ್ತು ಭಾನುಮತಿ ಆನೆಗಳು ಮೆರವಣಿಗೆಯಲ್ಲಿವೆ.
ವೈಭವದ ಹೆಚ್ಚಿಸಿದ ಸಾಂಸ್ಕೃತಿಕ ಕಲಾ ತಂಡ
ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಂಡಿವೆ. ಇವು ಮೆರವಣಿಗೆಯ ವೈಭವ ಹೆಚ್ಚಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200