ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021
ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 25 ಸಾವಿರ ದಿನಸಿ ಕಿಟ್‍ಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಸಂಸದ ಬಿ.ವೈ.ರಾಘವೇಂದ್ರ, ಭಾನುವಾರದಿಂದ ಒಂದು ವಾರದ ಅವಧಿಯಲ್ಲಿ ಒಂದೊಂದು ತಾಲೂಕಿನಲ್ಲಿ ವಿತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ನಗರದಲ್ಲಿ ಮೇ 30ರಂದು ಕಿಟ್ ವಿತರಣೆ ಮಾಡಲಾಗುತ್ತದೆ. ತೀರ್ಥಹಳ್ಳಿ ಮೇ 31, ಹೊಸನಗರ 1 ಜೂನ್, ಸಾಗರ 1 ಜೂನ್, ಶಿವಮೊಗ್ಗ ತಾಲೂಕು, ಹೊಳೆಹೊನ್ನೂರು ಜೂನ್ 2, ಸೊರಬ ಜೂನ್ 3, ಭದ್ರಾವತಿ 4 ಜೂನ್, ಶಿಕಾರಿಪುರದಲ್ಲಿ ಜೂನ್ 5ರಂದು ಫುಡ್ ಕಿಟ್ ವಿತರಿಸಲಾಗುತ್ತದೆ ಎಂದು ಸಂಸದರ ಬಿ.ವೈ.ರಾಘವೇಂದ್ರ ತಿಳಿಸಿದರು.
ಸೇವಾ ಭಾರತಿ ಸಂಘಟನೆ ಮತ್ತು ಪ್ರೇರಣಾ ಟ್ರಸ್ಟ್ ವತಿಯಿಂದ ಈ ಫುಡ್ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.
ಆರ್‍ಎಸ್‍ಎಸ್ ಪ್ರಮುಖ ಪಟ್ಟಾಭಿರಾಮ್ ಮಾತನಾಡಿ, ಲಾಕ್ ಡೌನ್ ಮುಂದುವರೆಯಲಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಈ ಅವಧಿಯಲ್ಲಿ ಸಂಕಷ್ಟಕ್ಕೆ ಸಿಲುಕುವ ಕುಟುಂಬಗಳಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ಈ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯ ವಿಡಿಯೋ ವರದಿ ಇಲ್ಲಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುನೀತಾ ಅಣ್ಣಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]