ಶಿವಮೊಗ್ಗ ನಗರದ 3 ಕ್ರೈಮ್ ನ್ಯೂಸ್ ಅಪ್ ಡೇಟ್ | SHIMOGA CRIME NEWS

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Atiyas Motors

SHIVAMOGGA LIVE NEWS | 21 NOVEMBER 2022

ಅನುಮಾನಾಸ್ಪದ ವರ್ತನೆ, ವೈದ್ಯಕೀಯ ಪರೀಕ್ಷೆ ಬಳಿಕ ‘ದೇವ್ರು’ ಅರೆಸ್ಟ್ | CRIME NEWS

SHIMOGA : ಪೊಲೀಸ್ ಗಸ್ತು ವೇಳೆ ನ್ಯೂ ಮಂಡ್ಲಿ ಸರ್ಕಲ್ (NEW MANDLI) ಬಳಿ ಯುವಕನೊಬ್ಬ NEWS 1 jpgಅಮಲಿನಲ್ಲಿ ಅನುಮಾನಾಸ್ಪದವಾಗಿ ವರ್ತನೆ ಮಾಡುತ್ತಿದ್ದ. ಅತನ ವಿಚಾರಣೆ ವೇಳೆ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ (Mc Gann Hospital) ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ (Ganja) ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಆತನನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನ್ಯೂ ಮಂಡ್ಲಿ ನಿವಾಸಿ ಪುನಿತ್ ಕುಮಾರ್ ಅಲಿಯಾಸ್ ದೇವ್ರು ಎಂದು ಗುರುತಿಸಲಾಗಿದೆ. NDPS ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಬೈಕ್ ಅಡ್ಡಗಟ್ಟಿ ಬೆನ್ನಿಗೆ ಚಾಕು ಹಾಕಿದ, ಕೆಳಗೆ ಬಿದ್ದಾಗ ಎದೆ ಚಾಕು ಹಾಕಲು ಯತ್ನ | CRIME NEWS

SHIMOGA | ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. NEWS 2 jpgಗಾಯಗೊಂಡಿದ್ದ ಟ್ಯಾಂಕ್ ಮೊಹಲ್ಲಾ ನಿವಾಸಿ ಬಷೀರ್ ಖಾನ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆ ಅದೆ ಬಡಾವಣೆಯ ಮೊಹಮ್ಮದ್ ಜಾಫರ್ ಸಾದಿಕ್ ಅಲಿಯಾಸ್ ಬಾಷಿಗಂಡ ಎಂಬಾತ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಟ್ಯಾಂಕ್ ಮೊಹಲ್ಲಾದಲ್ಲಿ ಘಟನೆ ಸಂಭವಿಸಿದೆ.

ಬೈಕ್ ಅಡ್ಡಗಟ್ಟಿದ ಮೊಹಮ್ಮದ್ ಜಾಫರ್ ಸಾದಿಕ್, ಬಷಿರ್ ಖಾನ್ ಅವರ ಬೆನ್ನಿಗೆ ಚಾಕು ಹಾಕಿದ್ದಾನೆ. ಕೆಳಗೆ ಬಿದ್ದಾಗ ಎದೆಗೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಸ್ಥಳೀಯರು ಜಗಳ ಬಿಡಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shimoga Nanjappa Hospital

ರವೀಂದ್ರ ನಗರದಲ್ಲಿ ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಮೇಲೆ ಪೊಲೀಸ್ ದಾಳಿ | CRIME NEWS

SHIMOGA | ರವೀಂದ್ರ ನಗರದ ಪಾರ್ಕ್ ಬಳಿ ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಮೇಲೆ NEWS 3 jpgಪೊಲೀಸರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರನ್ನು ಬಂಧಿಸಲಾಗಿದ್ದು, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿ ಮೇರೆಗೆ ಜಯನಗರ ಠಾಣೆ ಇನ್ಸ್ ಪೆಕ್ಟರ್ ಮಾದಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು, 5 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ವಸಂತ ಕುಮಾರ್, ರಾಜು, ಗೋವಿಂದ, ಅಭಿಲಾಷ್, ಸಚಿನ್ ಎಂದು ಗುರುತಿಸಲಾಗಿದೆ. ಇವರಿಂದ ಖಾರದ ಪುಡಿ, ಎರಡು ಚಾಕು, ಒಂದು ರಾಡ್, ದೊಣ್ಣೆ, ಬೈಕ್ ವಶಕ್ಕೆ ಪಡೆಯಲಾಗಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ALSO READ | ರಾತ್ರೋರಾತ್ರಿ ಮೆಗ್ಗಾನ್ ಆಸ್ಪತ್ರೆ ಮುಂಭಾಗ ವೈದ್ಯರು, ಸಿಬ್ಬಂದಿಯಿಂದ ದಿಢೀರ್ ಪ್ರತಿಭಟನೆ

Shimoga Nanjappa HOspital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 21, 2022

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

Leave a Comment