ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SHIMOGA | 4 ಜುಲೈ 2022
ಸ್ಮಾರ್ಟ್ ಸಿಟಿ (SMART CITY) ಯೋಜನೆ ಕಚೇರಿ ಇರುವ ರಸ್ತೆಯಲ್ಲಿಯೇ ಫುಟ್ ಪಾತ್ ಕಾಮಗಾರಿ ಕಳಪೆಯಾಗಿದೆ. ಈ ಕುರಿತು 36 ಫೋಟೊಗಳ ಸಾಕ್ಷಿ ಸಹಿತ ನಾಗರಿಕ ಹಿತರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದೆ.
ವೇದಿಕೆಯ ಆರೋಪವೇನು?
ಸ್ಮಾರ್ಟ್ ಸಿಟಿ ಯೋಜನೆ ಕಚೇರಿ ಇರುವ ರಸ್ತೆಯಲ್ಲೇ ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿ ನಡೆಸಲಾಗಿದೆ. ನೆಹರೂ ರಸ್ತೆಯಲ್ಲಿ ಯೋಜನೆಯ ಕಚೇರಿ ಇದೆ. ಇಲ್ಲಿನ ಫುಟ್ ಪಾತ್ ಕಾಮಗಾರಿ ಮುಗಿದು ಐದಾರು ತಿಂಗಳು ಕಳೆದಿದೆ. ಅಷ್ಟರಲ್ಲಿ ಟೈಲ್ಸ್ ಕುಸಿದಿದೆ ಎಂದು ಆರೋಪಿಸಿದರು.
ಸಿಮೆಂಟ್ ಕಾಮಗಾರಿ ಅವೈಜ್ಞಾನಿಕ ಮತ್ತು ಕಳಪೆಯಾಗಿದೆ. ಅಲ್ಲಲ್ಲಿ ತಗ್ಗು ಬಿದ್ದಿದೆ. ಇನ್ನು, ಕಾಮಗಾರಿ ಮುಗಿಯುವ ಮೊದಲೆ ಟೈಲ್ಸ್ ಬಿರುಕು ಬಿಟ್ಟಿವೆ. ಇಲ್ಲಿ 24X7 ನೀರಿನ ಪೈಪುಗಳನ್ನು ಅವೈಜ್ಞಾನಿಕವಾಗಿ ಅಳವಡಿಸಲಾಗಿದೆ. ಇದರಿಂದ ಕೆಲವೆ ತಿಂಗಳಲ್ಲಿ ಫುಟ್ ಪಾತ್ ಮೇಲೆ ಓಡಾಡುವುದು ಕಷ್ಟವಾಗಲಿದೆ ಎಂದು ನಾಗರಿಕ ಹಿತರಕ್ಷಣಾ ವೇದಿಕೆ ಆರೋಪಿಸಿದೆ.
36 ಫೋಟೋಗಳ ಸಾಕ್ಷಿ
ಸ್ಮಾರ್ಟ್ ಸಿಟಿ (SMART CITY) ಯೋಜನೆ ಕಚೇರಿ ಇರುವ ರಸ್ತೆಯಲ್ಲೇ ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿ ನಡೆಸಲಾಗಿದೆ. ಇದರ ಕುರಿತು ನಾಗರಿಕ ಹಿತರಕ್ಷಣಾ ವೇದಿಕೆ ಸದಸ್ಯರು 36 ಫೋಟೊಗಳನ್ನು ತೆಗೆದಿದ್ದಾರೆ. ಇವುಗಳನ್ನು ಜಿಲ್ಲಾಧಿಕಾರಿ ಅವರಿಗೆ ಹಸ್ತಾಂತರಿಸಿದರು.
ಅಧಿಕಾರಿಗಳು, ಗುತ್ತಿಗೆದಾರರು ಹೊಣೆ
ಕಳಪೆ ಕಾಮಗಾರಿಗೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಠಾರೆ, ಮುಖ್ಯ ಇಂಜಿನಿಯರ್, ಕಾರ್ಯಪಾಲಕ ಇಂಜಿನಿಯರ್, ಅಧಿಕಾರಿಗಳು, ಗುತ್ತಿಗೆದಾರರು, ಗುಣಮಟ್ಟ ಖಾತರಿಪಡಿಸುವ ಏಜೆನ್ಸಿಗಳೆ ಹೊಣೆ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಆರೋಪಿಸಿದೆ.
ಇನ್ನು, ಕಾಮಗಾರಿ ಕಳಪೆಯಾಗಿದ್ದು ಒಮ್ಮೆ ಖುದ್ದಾಗಿ ಸ್ಥಳ ಪರಿಶೀಲನೆಗೆ ಬರಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರಿಗೆ ಮನವಿ ಮಾಡಿದರು. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ.ವಸಂತ ಕುಮಾರ್, ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಶೋಕ್ ಕುಮಾರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಹಳಿ ದಾಟುತ್ತಿದ್ದ ಕುರಿಗಳಿಗೆ ರೈಲು ಡಿಕ್ಕಿ, ಭದ್ರಾವತಿಯಲ್ಲಿ ಸಾಲು ಸಾಲು ಕುರಿಗಳು ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















