ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 6 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಶಿಕಾರಿಪುರ ಪಟ್ಟಣದ ಕುಂಬಾರಗುಂಡಿಯ ಸಾರ್ವಜನಿಕ ಸ್ಥಳದಲ್ಲಿ ಸ್ಕೂಟಿಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಯುವಕನಿಗೆ ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ನಾಲ್ಕು ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿಕಾರಿಪುರ ಪಟ್ಟಣದ ಯಾಸೀರ್ ಪಾಷಾ (28) ಶಿಕ್ಷೆಗೆ ಒಳಗಾದವ. ಈತ 2020ರ ಫೆ.2ರಂದು ಕುಂಬಾರಗುಂಡಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಶಿಕಾರಿಪುರ ಎಎಸ್ಪಿ ಎ.ಶ್ರೀನಿವಾಸಲು ಸಿಬ್ಬಂದಿಗಳೊಂದಿಗೆ ತೆರಳಿ ಯಾಸಿರ್‌ನನ್ನು ಬಂಧಿಸಿ 1.148 ಕೆಜಿ ಗಾಂಜಾ ಜಪ್ತಿ ಮಾಡಿದ್ದರು.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಎಎಸ್‌ಐ ಬೂದ್ಯಪ್ಪ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯಾಸೀರ್ ಪಾಷಾಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಸುರೇಶ್ ಕುಮಾರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಇದನ್ನೂ ಓದಿ – ಉಪನ್ಯಾಸಕಿಯ ವಾಟ್ಸಪ್‌ಗೆ ಅಪರಿಚಿತ ನಂಬರ್‌ನಿಂದ ಮೆಸೇಜ್, ಒಂದು ವಾರದ ಬಳಿಕ ಕಾದಿತ್ತು ಬಿಗ್ ಶಾಕ್