ಶಿವಮೊಗ್ಗ : ಸೊರಬ ತಾಲೂಕು ಚಿಟ್ಟೂರು ಗ್ರಾಮದ ವಾಸಿ ನಿಂಗರಾಜ (47) ತಮ್ಮ ಶುಂಠಿ ಹೊಲದಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವ ಆರೋಪ ದೃಢಪಟ್ಟಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಅಪರಾಧಿಗೆ 4 ವರ್ಷ ಕಠಿಣ ಕಾರಾಗೃಹ (Jail) ವಾಸ ಶಿಕ್ಷೆ ನೀಡಿ ಸೋಮವಾರ ಆದೇಶಿಸಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶುಂಠಿ ಹೊಲದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಖಚಿತ ಮಾಹಿತಿ ಮೇರೆಗೆ ಸೊರಬ ವಲಯ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ಸಿಬ್ಬಂದಿ 2022ರ ಸೆಪ್ಟೆಂಬರ್ 8ರಂದು ದಾಳಿ ನಡೆಸಿದ್ದರು. ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಅಪರಾಧಿಗೆ 4 ವರ್ಷಗಳ ಕಠಿಣ ಕಾರಾಗೃಹ (Jail) ವಾಸ ಸಜೆ ಮತ್ತು 25 ಸಾವಿರ ರೂ. ದಂಡ, 300 ಗ್ರಾಂ ಒಣ ಗಾಂಜಾ ಹೊಂದಿದ್ದಕ್ಕೆ 6 ತಿಂಗಳು ಕಠಿಣ ಕಾರಾಗೃಹವಾಸ ಸಜೆ ಮತ್ತು 5000 ರೂ. ದಂಡ ವಿಧಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ » ಸಾಗರ, ಸೊರಬ, ಶಿಕಾರಿಪುರದಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





