ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 29 MAY 2023
SHIMOGA : ಶಿವಮೊಗ್ಗ – ಬೆಂಗಳೂರು ಮಾರ್ಗದಲ್ಲಿ ಎಲೆಕ್ಟ್ರಿಕ್ ಬಸ್ (Electric Bus) ಸಂಚಾರ ಆರಂಭವಾಗಿದೆ. ಮೊದಲ ಇವಿ ಪವರ್ ಪ್ಲಸ್ ಬಸ್ಸಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಿಗೆ ಇನ್ನೂ ನಾಲ್ಕು ಎಲೆಕ್ಟ್ರಿಕ್ ಬಸ್ಸುಗಳನ್ನು ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗ ರಸ್ತೆಗಿಳಿಸಲು ನಿರ್ಧರಿಸಿದೆ. ಮೇ 30 ಮತ್ತು 31ರಂದು ಹಂತ ಹಂತವಾಗಿ ನಾಲ್ಕು ಬಸ್ಸುಗಳು ಈ ಮಾರ್ಗದಲ್ಲಿ ಸಂಚಾರ ಆರಂಭಿಸಲಿವೆ.
ಎಲೆಟ್ರಿಕ್ ಬಸ್ಸುಗಳ ಟೈಮ್ ಏನು?
ಎಲೆಕ್ಟ್ರಿಕ್ ಬಸ್ 1 : ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ತೆರಳಲಿದೆ. ಸಂಜೆ 6 ಗಂಟೆಗೆ ಬೆಂಗಳೂರು ತಲುಪಲಿದೆ. ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 5 ಗಂಟೆಗೆ ಶಿವಮೊಗ್ಗಕ್ಕೆ ಮರಳಲಿದೆ. (ಮೇ 27ರಂದು ಆರಂಭವಾಗಿದೆ)
ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು KSRTC ಇ-ಬಸ್ ಸೇವೆ ಶುರು, ಹೇಗಿದೆ ಬಸ್? ಟಿಕೆಟ್ ರೇಟ್ ಎಷ್ಟಿದೆ?
ಎಲೆಕ್ಟ್ರಿಕ್ ಬಸ್ 2 : ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದಿಂದ ಹೊರಡಲಿದೆ. ಸಂಜೆ 7 ಗಂಟೆಗೆ ಬೆಂಗಳೂರು ತಲುಪಲಿದೆ. ರಾತ್ರಿ 11.40ಕ್ಕೆ ಬೆಂಗಳೂರನಿಂದ ಹೊರಟು ಬೆಳಗ್ಗೆ 5.40ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ತಲುಪಲಿದೆ. (ಮೇ 30ರಂದು ಸಂಚಾರ ಆರಂಭ)
ಎಲೆಕ್ಟ್ರಿಕ್ ಬಸ್ 3 : ರಾತ್ರಿ 10.30ಕ್ಕೆ ಶಿವಮೊಗ್ಗದಿಂದ ಹೊರಟು ಬೆಳಗ್ಗೆ 4.30ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 6ಕ್ಕೆ ಶಿವಮೊಗ್ಗಕ್ಕೆ ಬರಲಿದೆ. (ಮೇ 30ರಂದು ಸಂಚಾರ ಆರಂಭ)
ಎಲೆಕ್ಟ್ರಿಕ್ ಬಸ್ 4 : ರಾತ್ರಿ 11.30ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ಬೆಳಗ್ಗೆ 5.30ಕ್ಕೆ ಬೆಂಗಳೂರು ತಲುಪಲಿದೆ. ಮಧ್ಯಾಹ್ನ 1ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 7ಕ್ಕೆ ಶಿವಮೊಗ್ಗ ತಲುಪಲಿದೆ. (ಮೇ 30ರಂದು ಸಂಚಾರ ಆರಂಭ)
ಎಲೆಕ್ಟ್ರಿಕ್ ಬಸ್ 5 : ಬೆಳಗಿನ ಜಾವ 4.45ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ಬೆಳಗ್ಗೆ 10.45ಕ್ಕೆ ಬೆಂಗಳೂರು ತಲುಪಲಿದೆ. ಮಧ್ಯಾಹ್ನ 2.45ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 8.45ಕ್ಕೆ ಶಿವಮೊಗ್ಗ ತಲುಪಲಿದೆ. (ಮೇ 31ರಂದು ಸಂಚಾರ ಆರಂಭ)
ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗಕ್ಕೆ ಒಟ್ಟು 10 ಎಲೆಕ್ಟ್ರಿಕ್ ಬಸ್ಸುಗಳನ್ನು (Electric Bus) ಹಂಚಿಕೆ ಮಾಡಲಾಗಿದೆ. ಮೊದಲ ಹಂತದಲ್ಲಿ 5 ಬಸ್ಸುಗಳು ಈ ಮಾರ್ಗದಲ್ಲಿ ಸಂಚಾರ ಆರಂಭಿಸುತ್ತಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422