ಶಿವಮೊಗ್ಗ: ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡ 50ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ದಂಡ ಮೊತ್ತದ ಅರ್ಧದಷ್ಟು ಪಾವತಿ ಮಾಡಬಹುದಾಗಿದೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
1990-91 ರಿಂದ 2019-20 ರೊಳಗೆ ಪ್ರಾದೇಶಿಕ ಸಾರಿಗೆ ಕಛೇರಿ (ಆರ್.ಟಿ.ಓ) ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳು ಮಾತ್ರ ಶೇಕಡಾ 50ರಷ್ಟು ದಂಡ ಪಾವತಿ ರಿಯಾಯಿತಿ ವ್ಯಾಪ್ತಿಗೆ ಒಳಪಡುತ್ತವೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಈ ಅವಧಿಯಲ್ಲಿ 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿದೆ. ಸಂಬಂಧಪಟ್ಟ ವಾಹನ ಮಾಲೀಕರು ಡಿ.12 ರೊಳಗೆ ರಿಯಾಯಿತಿ ಬಳಸಿಕೊಂಡು ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿ ಕೊಳ್ಳಬಹುದಾಗಿದೆ ಎಂದು ಆರ್.ಟಿ.ಓ ಮುರಗೇಂದ್ರ.ಬಿ.ಶಿರೋಲ್ಕರ್ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಹಂಪ್ಗಳ ಅವಾಂತರ, ಸಿಟ್ಟಾದ ಜನ, ಅಷ್ಟಕ್ಕು ಸಮಸ್ಯೆ ಏನು?
