ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ (Emergency) ಹೇರಿ 50 ವರ್ಷವಾಗಿದೆ. ಈ ಹಿನ್ನೆಲೆ ಜೂನ್ 27ರಂದು ಸಂಜೆ 5.30ಕ್ಕೆ ಡಾ. ಅಂಬೇಡ್ಕರ್ ಭವನದಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ಮೋಹನ್ ರೆಡ್ಡಿ ತಿಳಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್ ರೆಡ್ಡಿ, ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಮುಖ ಭಾಷಣ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ ಉಪಸ್ಥಿತರಿರಲಿದ್ದಾರೆ ಎಂದರು.

ಇನ್ನು, ತುರ್ತು ಪರಿಸ್ಥಿತಿಯ ಕರಾಳ ದಿನ ವಿಷಯದ ಮೇಲೆ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ಜೂನ್ 25ರ ಸಂಜೆಯೊಳಗೆ ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಳ್ಳಬೇಕು. ಜೂನ್ 26ರಂದು ಬಿಜೆಪಿ ಕಚೇರಿಯಲ್ಲೆ ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.
[su_quote cite=”ಎಸ್.ಎನ್.ಚನ್ನಬಸಪ್ಪ, ಶಾಸಕ“]ತುರ್ತು ಪರಿಸ್ಥಿತಿಯ ಸತ್ಯ ಸಂಗತಿ ಜನರಿಗೆ ತಿಳಿಸಬೇಕಿದೆ. ಸಂವಿಧಾನದ ವ್ಯವಸ್ಥೆ, ತುರ್ತು ಪರಿಸ್ಥಿತಿ ಸಂದರ್ಭ ಸಂವಿಧಾನದಲ್ಲಿ ಆದ ಬದಲಾವಣೆಗಳ ವಿಷಯಗಳನ್ನು ಜನರಿಗೆ ತಿಳಿಸಲು ಇದು ಶುಭ ಸಮಯ. ಆದ್ದರಿಂದ ಪ್ರಬಂಧ ಸ್ಪರ್ಧೆ ಮತ್ತು ಕಾರ್ಯಕ್ರಮ ಆಯೋಜಿಸಲಾಗಿದೆ.[/su_quote]
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















