ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್ ನಂಬರ್ 7411700200.
ನಮ್ಮ ಗ್ರೂಪ್ ಸೇರಿಲು ಇಲ್ಲಿ ಕ್ಲಿಕ್ ಮಾಡಿNEWS HIGHLIGHTS
ಶಿವಮೊಗ್ಗ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ (Emergency) ಹೇರಿ 50 ವರ್ಷವಾಗಿದೆ. ಈ ಹಿನ್ನೆಲೆ ಜೂನ್ 27ರಂದು ಸಂಜೆ 5.30ಕ್ಕೆ ಡಾ. ಅಂಬೇಡ್ಕರ್ ಭವನದಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ಮೋಹನ್ ರೆಡ್ಡಿ ತಿಳಿಸಿದ್ದಾರೆ. ➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್ ರೆಡ್ಡಿ, ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪ್ರಮುಖ ಭಾಷಣ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ ಉಪಸ್ಥಿತರಿರಲಿದ್ದಾರೆ ಎಂದರು.

ಇನ್ನು, ತುರ್ತು ಪರಿಸ್ಥಿತಿಯ ಕರಾಳ ದಿನ ವಿಷಯದ ಮೇಲೆ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ಜೂನ್ 25ರ ಸಂಜೆಯೊಳಗೆ ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಳ್ಳಬೇಕು. ಜೂನ್ 26ರಂದು ಬಿಜೆಪಿ ಕಚೇರಿಯಲ್ಲೆ ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.
ತುರ್ತು ಪರಿಸ್ಥಿತಿಯ ಸತ್ಯ ಸಂಗತಿ ಜನರಿಗೆ ತಿಳಿಸಬೇಕಿದೆ. ಸಂವಿಧಾನದ ವ್ಯವಸ್ಥೆ, ತುರ್ತು ಪರಿಸ್ಥಿತಿ ಸಂದರ್ಭ ಸಂವಿಧಾನದಲ್ಲಿ ಆದ ಬದಲಾವಣೆಗಳ ವಿಷಯಗಳನ್ನು ಜನರಿಗೆ ತಿಳಿಸಲು ಇದು ಶುಭ ಸಮಯ. ಆದ್ದರಿಂದ ಪ್ರಬಂಧ ಸ್ಪರ್ಧೆ ಮತ್ತು ಕಾರ್ಯಕ್ರಮ ಆಯೋಜಿಸಲಾಗಿದೆ.ಎಸ್.ಎನ್.ಚನ್ನಬಸಪ್ಪ, ಶಾಸಕ
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
EDITOR / AUTHOR PROFILE
Published : June 23, 2025 at 7:20 PM IST