ಶಿವಮೊಗ್ಗ ಲೈವ್
ಶಿವಮೊಗ್ಗ: ಅಂತರರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಪ್ರಯುಕ್ತ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದಲ್ಲಿ 5ಕೆ ಮ್ಯಾರಥಾನ್ ಆಯೋಜಿಸಲಾಗಿತ್ತು.
ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹೇಮಂತ್.ಎನ್ ಅವರು ಮ್ಯಾರಥಾನ್‌ಗೆ ಚಾಲನೆ ನೀಡಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ. ಕಾರಿಯಪ್ಪ ಉಪಸ್ಥಿತರಿದ್ದರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?
ಡಿಎಆರ್ ಮೈದಾನದಿಂದ ಆರಂಭವಾದ ಮ್ಯಾರಥಾನ್ ಅಶೋಕ ವೃತ್ತ, ಎ.ಎ. ವೃತ್ತ, ಗೋಪಿ ವೃತ್ತ, ಜೈಲು ವೃತ್ತ ಹಾಗೂ ಹೆಲಿಪ್ಯಾಡ್ ವೃತ್ತದ ಮಾರ್ಗವಾಗಿ ಸಾಗಿ ಮತ್ತೆ ಡಿಎಆರ್ ಮೈದಾನದಲ್ಲಿ ಮುಕ್ತಾಯಗೊಂಡಿತು. ಬಳಿಕ ವಿವಿಧ ವಿಭಾಗಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮ್ಯಾರಥಾನ್‌ನಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?