ಶಿವಮೊಗ್ಗದ ಅಂಗಡಿಗಳು, ಉದ್ದಿಮೆಗಳಿಗೆ 15 ದಿನದ ಗಡುವು, ನಿಯಮ ಉಲ್ಲಂಘಿಸಿದರೆ ಕೇಸ್‌, ಪಾಲಿಕೆಯಿಂದ ಎಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 7 JANUARY 2024

SHIMOGA : ನಗರದ ಎಲ್ಲ ಅಂಗಡಿ, ಉದ್ದಿಮೆಗಳು ಮತ್ತು ಜಾಹೀರಾತು ಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆ ಬಳಸಬೇಕು. ಈ ನಿಯಮ ಉಲ್ಲಂಘಿಸಿದರೆ ಉದ್ದಿಮೆಗಳ ಪರವಾನಿಗೆ ರದ್ದುಪಡಿಸಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ದ್ವಿಭಾಷಾ ಅಥವಾ ಬಹುಭಾಷಾ ಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಇರಬೇಕು. ಇನ್ನು 15 ದಿನದಲ್ಲಿ ಅಂಗಡಿ, ಉದ್ದಿಮೆಗಳು ಮಾಲೀಕರು ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಪಾಲಿಕೆಯ ಆರೋಗ್ಯ ವಿಭಾಗದಿಂದ ಜಂಟಿ ಸರ್ವೆ ನಡೆಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡಿದರೆ ಪರವಾನಿಗೆ ರದ್ದುಪಡಿಸಲಾಗುತ್ತದೆ. ಅಲ್ಲದೆ ಕರ್ನಾಟಕ ಕಾರ್ಪೋರೇಷನ್ ಕಾಯ್ದೆ 1976ರ ನಿಯಮ ಮತ್ತು ಇತರೆ ಕಾನೂನಿನ ಅಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ದಿಢೀರ್‌ ರದ್ದು, ಟರ್ಮಿನಲ್‌ನಲ್ಲೇ ಪ್ರಯಾಣಿಕರ ಪ್ರತಿಭಟನೆ, ಅಧಿಕಾರಿಗಳಿಗೆ ತರಾಟೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 7, 2024

Leave a Comment