SHIMOGA : ನಗರದಲ್ಲಿ ಆಯೋಜಿಸಿದ್ದ ಸ್ವದೇಶಿ ಮೇಳಕ್ಕೆ ತೆರೆ ಬಿದ್ದಿದೆ. ಕಳೆದ ಐದು ದಿನದಲ್ಲಿ ಅಂದಾಜು 7.68 ಕೋಟಿ ರೂ. ವಹಿವಾಟು ನಡೆದಿದೆ. 3.75 ಲಕ್ಷ ಜನರು ಮೇಳಕ್ಕೆ ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ.
ವೀಕೆಂಡ್ನಲ್ಲಿ ಜನವೋ ಜನ
ಸ್ವದೇಶಿ ಜಾಗರಣ ಮಂಚ್ ವತಿಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಕಳೆದ ಐದು ದಿನದಿಂದ ಸ್ವದೇಶಿ ಮೇಳ ಆಯೋಜಿಸಲಾಗಿತ್ತು. ಸುಮಾರು 200 ಮಳಿಗೆಗಳು ಇದ್ದವು. ಮೊದಲ ದಿನದಿಂದಲೆ ಮೇಳಕ್ಕೆ ಉತ್ತಮ ಸ್ಪಂದನೆ ಲಭಿಸಿತ್ತು. ವೀಕೆಂಡ್ ಸಂದರ್ಭ ದೊಡ್ಡ ಸಂಖ್ಯೆಯ ಜನರು ಮೇಳದಲ್ಲಿ ಪಾಲ್ಗೊಂಡರು.
ಮೇಳಕ್ಕಾಗಿ ಮೂರು ತಿಂಗಳು ನಿರಂತರ ಸಂಘಟನೆ ಮಾಡಲಾಗಿದೆ. ಇದರ ಪರಿಣಾಮ ಮೇಳದಲ್ಲಿ 7.68 ಕೋಟಿ ರೂ. ವಹಿವಾಟು ನಡೆದಿದೆ. 3.75 ಲಕ್ಷ ಜನರು ಸ್ವದೇಶಿ ಮೇಳದಲ್ಲಿ ಪಾಲ್ಗೊಂಡಿದ್ದಾರೆ.ಹರ್ಷ ಕಾಮತ್, ಸಂಘಟಕ
ಸ್ವದೇಶಿ ಮೇಳಕ್ಕೆ ತೆರೆ
ಐದು ದಿನದ ಸ್ವದೇಶಿ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಫ್ರೀಡಂ ಪಾರ್ಕ್ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು.
ವಿದೇಶಿ ವಸ್ತುಗಳಿಂದ ಸ್ಥಳೀಯ ಉದ್ಯಮಿಗಳನ್ನು ಕಷ್ಟಕ್ಕೆ ದೂಡಿದಂತಾಗುತ್ತದೆ. ಆದ್ದರಿಂದ ಒಂದೊಂದೆ ಸ್ವದೇಶಿ ಉತ್ಪನ್ನ ಬಳಕೆ ಮಾಡಲು ಆರಂಭಿಸಿದರೆ ವಿದೇಶಿ ವಸ್ತುಗಳನ್ನು ದೂರ ಸರಿಸಬಹುದು. ನಿತ್ಯ ಬಳಕೆ ವಸ್ತುಗಳಿಂದಲೆ ಈ ಪ್ರಯತ್ನ ಶುರು ಮಾಡಬೇಕಿದೆ.ಅನ್ನದಾಶಂಕರ ಪಾಣಿಗ್ರಾಹಿ, ಅಖಿಲ ಭಾರತ ಸಂಘರ್ಷ ವಾಹಿನಿ
ಭಾರತದಲ್ಲಿ ಸಿದ್ಧವಾದ ವಸ್ತುಗಳಿಗೆ ವಿದೇಶದಲ್ಲಿ ಭಾರಿ ಬೇಡಿಕೆ ಇದೆ. ಸ್ಥಳೀಯರು ಸ್ಥಳೀಯವಾಗಿ ತಯಾರಾದ ಉತ್ಪನ್ನಗಳಿಗೆ ಬೆಲೆ ನೀಡಬೇಕು.ವಿನಯ ಗುರೂಜಿ, ಗೌರಿಗದ್ದೆ
ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪ್ರಮುಖರಾದ ಡಾ. ಧನಂಜಯ ಸರ್ಜಿ ಸೇರಿದಂತೆ ಹಲವರು ಇದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ