SHIVAMOGGA LIVE NEWS | 17 NOVEMBER 2022
SHIMOGA | ಪೊಲೀಸ್, ಸಾರಿಗೆ ಇಲಾಖೆ ಅಧಿಕಾರಿಗಳು ಖಾಸಗಿ ಬಸ್ (private bus) ಮಾಲೀಕರೊಂದಿಗೆ ಡಿಎಆರ್ ಸಭಾಂಗಣದಲ್ಲಿ ಸಭೆ ನಡೆಸಿದರು. ಬಸ್ ಮಾಲೀಕರಿಗೆ ಎಂಟು ಪ್ರಮುಖ ಸೂಚನೆ ನೀಡಿದ್ದಾರೆ. ಇವುಗಳನ್ನು ಪಾಲಿಸದೆ ಇದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
(private bus)
ಏನದು 8 ಸೂಚನೆ?
ಖಾಸಗಿ ಬಸ್ (private bus) ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ತಪಾಸಣೆ ವೇಳೆ ಸಮವಸ್ತ್ರ ಧರಿಸದೆ ಇರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಚಾಲಕರು ಹಾಗೂ ನಿರ್ವಾಹಕರುಗಳು ಸಾರ್ವಜನಿಕರೊಂದಿಗೆ ಸೌಜನ್ಯ ರೀತಿಯಲ್ಲಿ ವರ್ತಿಸಬೇಕು. ತೊಂದರೆಯಾಗದಂತೆ ನಡೆದುಕೊಳ್ಳಬೇಕು.
ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ವೇಗ ಮಿತಿ ಹಾಗೂ ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಬೇಕು.
ಬಸ್ ಗಳನ್ನು ಎಲ್ಲೆಂದರಲ್ಲಿ ನಿಲ್ಲಿಸದೇ, ನಿಗದಿಪಡಿಸಿದ ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ ಮಾಡಬೇಕು.
ಬಸ್ ಗಳಲ್ಲಿ ಸರಕು ಸಾಗಾಣಿಕೆಯ (Parcel Service) ಸಂದರ್ಭ ನಿಗಾ ವಹಿಸಬೇಕು. ಅನುಮಾನಾಸ್ಪದ ಸರಕುಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು.
Public Safety Act ಪ್ರಕಾರ ಶಿವಮೊಗ್ಗ ನಗರ ಖಾಸಗಿ ಬಸ್ ನಿಲ್ದಾಣ ಮತ್ತು ತಾಲ್ಲೂಕು ಬಸ್ ನಿಲ್ದಾಣಗಳಲ್ಲಿ 10 ದಿನಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು.
ಬಸ್ ಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಕಂಡು ಬಂದಲ್ಲಿ ಸಂಬಂಧ ಪಟ್ಟ ಖಾಸಗಿ ಬಸ್ ಗಳ ಮಾಲೀಕರೆ ಹೊಣೆಯಾಗುತ್ತಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಡಿಸಿ, ಎಸ್ಪಿಗೆ ಮೀಟರ್ ಹಾಕದೆ, ಯದ್ವ ತದ್ವ ದುಡ್ಡು ಕೇಳಿದ ಆಟೋ ಚಾಲಕ, ಮುಂದೇನಾಯ್ತು?
ಚಾಲಕರು ಬಸ್ ಗಳನ್ನು ಚಾಲನೆ ಮಾಡುವ ಸಮಯದಲ್ಲಿ, ಮೊಬೈಲ್ ಬಳಸುವುದು ಕಂಡುಬಂದಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ 6 ಪೊಲೀಸ್ ಠಾಣೆಯ 82 ರೌಡಿಗಳನ್ನು ಸಾಲಾಗಿ ನಿಲ್ಲಿಸಿ ವಾರ್ನಿಂಗ್ ನೀಡಿದ ಎಸ್.ಪಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.