ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಶಿವಮೊಗ್ಗದ ಸ್ಮಾರ್ಟ್ ಸಿಟಿ ಯೋಜನೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಸಿದರು. ಬಳಿಕ ನಗರದ ವಿವಿಧೆಡೆ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 80 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿದರು.
ನಗರಾದ್ಯಂತ ಕಾಮಗಾರಿ ಉದ್ಘಾಟನೆ
ಶಂಕುಸ್ಥಾಪನೆ ಬಳಿಕ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಹಲವು ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸನ ನೆರವೇರಿಸಿದರು.
ಶಿಪ್ಪನಾಯಕ ಅರಮನೆ ಪುನರುಜ್ಜೀವನ ಮತ್ತು ಮರು ಬಳಕೆ ಯೋಜನೆ, ಖಾಸಗಿ ಬಸ್ ನಿಲ್ದಾಣ ಬಳಿ ಬೀದಿ ಬದಿ ವ್ಯಾಪಾರಿಗಳ ವಲಯ, ಬೊಮ್ಮನಕಟ್ಟೆಯಿಂದ ಬಸವೇಶ್ವರನಗರದವರೆಗೆ ರಾಜಾ ಕಾಲುವೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಇನ್ನು, ಕುಟುಂಬ ಕಲ್ಯಾಣ ಆಸ್ಪತ್ರೆ ಮುಂಭಾಗ ಅಭಿವೃದ್ಧಿಪಡಿಸಿದ ಪಾರ್ಕ್, ಸಾರ್ವಜನಿಕ ಗ್ರಂಥಾಲಯದಲ್ಲಿ ಈ ಲೈಬ್ರರಿ, ಜಯನಗರದಲ್ಲಿ ಐದು ಕನ್ಸರ್ವೆನ್ಸಿ ಸಾಲುಗಳು, ವಿನೋಬನಗರದ ಡಿವಿಜಿ ಉದ್ಯಾನವಗಳನ್ನು ಉದ್ಘಾಟನೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಟಾರೆ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422