ವಿಶೇಷ ಕಾರ್ಯಾಚರಣೆ, ಶಿವಮೊಗ್ಗ ಜಿಲ್ಲೆಯಲ್ಲಿ 99 ವಾಹನಗಳು ವಶಕ್ಕೆ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 15 JUNE 2023

SHIMOGA / SORABA : ಕರ್ಕಶ ಶಬ್ದ ಮಾಡುವ ಹಾರನ್‌ ಬಳಕೆ, ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ (Seized) ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shrill-Horns-Vehicles-seized-at-Shimoga-and-Anavatti-in-Soraba

ಶಿವಮೊಗ್ಗ ರಿಪೋರ್ಟ್‌

ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 39 ವಾಹನಗಳನ್ನು ವಶಕ್ಕೆ (Seized)  ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರ ವಿರುದ್ಧ ಮೋಟರ್‌ ವೆಹಿಕಲ್‌ ಕಾಯ್ದೆ ಅಡಿಯ ಪ್ರಕರಣ ದಾಖಲು ಮಾಡಲಾಗಿದೆ.

ಸೊರಬ ರಿಪೋರ್ಟ್‌

ತಾಲೂಕಿನ ಆನವಟ್ಟಿ ಜೂನಿಯರ್‌ ಕಾಲೇಜು ಮತ್ತು ಬಸ್‌ ನಿಲ್ದಾಣದ ಬಳಿ ಪೊಲೀಸರು ವಾಹನ ತಪಾಸಣೆ ನಡೆಸಿದರು. ಕರ್ಕಶ ಶಬ್ದ ಉಂಟು ಮಾಡುವ ಹಾರನ್‌, ಚಾಲನಾ ಪರವಾನಗಿ ಇಲ್ಲದಿರುವುದು, ಹೆಲ್ಮೆಟ್‌ ರಹಿತ ಚಾಲನೆ ಕೇಸ್‌ಗಳನ್ನು ಪತ್ತೆ ಹಚ್ಚಿ 60 ಪ್ರಕರಣ ದಾಖಲು ಮಾಡಲಾಗಿದೆ. 60 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುವಕನ ಕೊಲೆ, ತಲೆಯ ಹಿಂಭಾಗಕ್ಕೆ ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ, ಕಾರಣವೇನು?

ಸೊರಬ ಸರ್ಕಲ್‌ ಇನ್ಸ್‌ಪೆಕ್ಟರ್‌ ರಾಜಶೇಖರ್‌, ಆನವಟ್ಟಿ ಸಬ್‌ ಇನ್ಸ್‌ಪೆಕ್ಟರ್‌ಗಳಾದ ರಾಜುರೆಡ್ಡಿ ಬೆನ್ನೂರು, ವಿಠಲ ಅಗಸಿ, ಸೊರಬ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಮಲ್ಲಪ್ಪ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪರಿಶ್ರಮ ನೀಟ್‌ ಅಕಾಡೆಮಿ

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment