ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 AUGUST 2023
SHIMOGA : ಆರ್‌ಎಂಎಲ್ ನಗರದ ಅಂಗಡಿಯೊಂದರ ಬಳಿ ತಂದೆ ಹಾಗೂ ಮಗನ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ರಕರ್ತ (Journalist) ಮುದಾಸಿರ್ ಮತ್ತು ಆತನ ಮಗನ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ರಕರ್ತನ ಮೇಲಿನ ಹಲ್ಲೆಗೆ ಖಂಡನೆ
ಪತ್ರಕರ್ತ ಮುದಾಸಿರ್ ಅಹಮದ್ ಮೇಲಿನ ದುಷ್ಕರ್ಮಿಗಳ ಹಲ್ಲೆಯನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಖಂಡಿಸಿವೆ. ತಮ್ಮ ಮಗನ ಜತೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಈ ಹಲ್ಲೆಗೆ ಬೇರೆಯದೆ ಆಯಾಮ ಇರುವ ಅನುಮಾನವಿದ್ದು, ಪೊಲೀಸ್ ಇಲಾಖೆ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು












