ಶಿವಮೊಗ್ಗದ ‘ಹರೋಹರ ಜಾತ್ರೆ’ ದಿನಾಂಕ ಘೋಷಣೆ, ಜುಲೈ ಬದಲು ಆಗಸ್ಟ್‌ ತಿಂಗಳಲ್ಲಿ ನಡೆಯುತ್ತಿರುವುದೇಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 4 AUGUST 2023

SHIMOGA : ಗುಡ್ಡೇಕಲ್‌ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಆಡಿಕೃತ್ತಿಕೆ ಜಾತ್ರೆ (Aadi Krithigai Jathre) ಆ.8 ಮತ್ತು 9ರಂದು ನಡೆಯಲಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ರಾಜಶೇಖರಪ್ಪ ತಿಳಿಸಿದರು.

harohara Jathre in Shimoga

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ರಾಜಶೇಖರಪ್ಪ, ಆ.8ರಂದು ಭರಣಿ ಕಾವಡಿ ಮತ್ತು ಆ.9ರಂದು ಆಡಿಕೃತ್ತಿಗೆ ಹರೋಹರ ಜಾತ್ರೆ ನಡೆಯಲಿದೆ ಎಂದರು.

ಆ.8 ಮತ್ತು 9ರಂದು ಜಾತ್ರೆ ನಡೆಯಲಿದೆ. ಪ್ರತಿ ವರ್ಷ ಜುಲೈ ತಿಂಗಳಿನಲ್ಲಿ ಆಡಿಕೃತ್ತಿಕೆ ಜಾತ್ರೆ ನಡೆಯುತ್ತಿತ್ತು. ಆದರೆ ಈ ಬಾರಿ ಅಧಿಕ ಮಾಸ ಇರುವುದರಿಂದ ಆಗಸ್ಟ್‌ ತಿಂಗಳಿನಲ್ಲಿ ಜಾತ್ರೆ ನಡೆಸಲಾಗುತ್ತಿದೆ. ಜಾತ್ರೆಗಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಊಟ, ತಿಂಡಿ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲಾಗಿದೆ.ಡಿ.ರಾಜಶೇಖರ್‌, ದೇಗುಲ ಸಮಿತಿ ಅಧ್ಯಕ್ಷ

ಇದನ್ನೂ ಓದಿ – ಮಲೇಷಿಯಾ, ಸೇಲಂಗಿಂತಲು ಶಿವಮೊಗ್ಗದಲ್ಲಿ ಅತಿ ಎತ್ತರದ ಪ್ರತಿಮೆ, ಹೇಗಿರುತ್ತೆ? ಇಲ್ಲಿದೆ 7 ಪ್ರಮುಖ ವಿಶೇಷತೆ

ಜಾತ್ರೆ ಅಚ್ಚುಕಟ್ಟಾಗಿ ನಡೆಸಲು ಆರಕ್ಷಕ ಸಿಬ್ಬಂದಿ ನೆರವು ಕೇಳಿದ್ದೇವೆ. ಜೊತೆಗೆ 400 ರಿಂದ 500 ಸ್ವಯಂ ಸೇವಕರನ್ನು ಜೋಡಿಸಿಕೊಂಡಿದ್ದೇವೆ. ಕಳೆದ ವರ್ಷಕ್ಕಿಂತಲು ಹೆಚ್ಚಿನ ಸಂಖ್ಯೆಯ ಭಕ್ತರು ಜಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಉಪಾಧ್ಯಕ್ಷ ಎಂ.ಪಿ.ಸಂಪತ್‌ ಸೇರಿದಂತೆ ದೇವಸ್ಥಾನ ಸಮಿತಿಯ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

PARISHRAMA neet academy

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment