SHIVAMOGGA LIVE NEWS | 25 JULY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಲೈವ್.ಕಾಂ : ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಆಡಿಕೃತ್ತಿಕೆ ಜಾತ್ರೆ (Aadi Krithigai Jathre) ಜುಲೈ 28 ಮತ್ತು 29ರಂದು ನಡೆಯಲಿದೆ. ಪ್ರತಿ ವರ್ಷದಂತೆ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಕಾವಡಿ ಹೊತ್ತು ಬರಲಿದ್ದಾರೆ. ಈ ಬಾರಿ ಭಕ್ತರು ದೇವಸ್ಥಾನಕ್ಕೆ ಬರುವ ಮತ್ತು ಹಿಂತಿರುಗುವ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ರಾಜಶೇಖರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ರಾಜಶೇಖರಪ್ಪ, ಆಡಿಕೃತ್ತಿಕೆ ಜಾತ್ರೆಗೆ ಬರುವ ಭಕ್ತರು ಈ ಬಾರಿ ವಿದ್ಯಾನಗರದ ನೂತನ ಫ್ಲೈ ಓವರ್ ಮೇಲಿಂದ ಬರಬೇಕಿದೆ. ಫ್ಲೈ ಓವರ್ ಇಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಪ್ರವೇಶಿಸಬೇಕು. ದರ್ಶನ ಮುಗಿಸಿದವರು ಫ್ಲೈ ಓವರ್ ಕಳೆಗಿನ ರಸ್ತೆಯಲ್ಲಿ ತೆರಳಬೇಕಾಗುತ್ತದೆ. ಇದರಿಂದ ಜನಸಂದಣಿ ತಡೆಯಬಹುದಾಗಿದೆ ಎಂದು ತಿಳಿಸಿದರು.

ಮಫ್ತಿಯಲ್ಲಿ ಪೊಲೀಸ್, ಸಿಸಿ ಕ್ಯಾಮರಾ
ಜಾತ್ರೆ ಸಂದರ್ಭ ಪುಂಡರ ಹಾವಳಿ ತಡೆಗೆ ಈ ಬಾರಿ ಕಟ್ಟುನಿಟ್ಟು ಕ್ರಮ ಕೈಗೊಳ್ಳಲಾಗಿದೆ. ಸುಮಾರು 100 ಪೊಲೀಸರು ಮಫ್ತಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧೆಡೆ ಸುಮಾರು 30 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದರ ಮೂಲಕ ಪ್ರತಿಯೊಬ್ಬರ ಮೇಲೆ ಕಣ್ಗಾವಲು ಇಡಲಾಗುತ್ತದೆ ಎಂದರು.

ಪ್ರಮುಖರಾದ ಪಿ.ರಘುಕುಮಾರ್, ಎಂ.ರಾಜು, ಎಂ.ಲೋಕೇಶ್, ಟಿ.ರವಿಕುಮಾರ್, ಪಿ.ಸುಬ್ರಹ್ಮಣಿ ಉಪಸ್ಥಿತರಿದ್ದರು.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಬಿರುಸಾದ ಮಳೆ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





