ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 DECEMBER 2022
ಶಿವಮೊಗ್ಗ : ವಿದೇಶದಿಂದ ಅಡಕೆ (foreign adike) ಆಮದು ತಡೆಗೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ನಾಯಕಿ ನೇತ್ರಾವತಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಎರಡನೆ ದಿನಕ್ಕೆ ಕಾಲಿಟ್ಟಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೇತ್ರಾವತಿ ಅವರ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿ 24 ಗಂಟೆ ಕಳೆದಿದೆ. ಈತನಕ ಯಾರೊಬ್ಬರು ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಅಡಕೆ ಧಾರಣೆ | 19 ಡಿಸೆಂಬರ್ 2022 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಕೆ ರೇಟ್?
ಅಡಕೆ ಆಮದು (foreign adike) ಮಾಡಿಕೊಳ್ಳಲು ಒಪ್ಪಿಗೆ ಸೂಚಿಸಿದಾಗಲೆ ಬೆಳೆಗಾರರು ವಿರೋಧಿಸಿದ್ದರು. ಈ ನಿರ್ಧಾರದಿಂದ ಬೆಲೆ ಕುಸಿತ ಆಗುವುದಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಈಗ ಬೆಲೆ ಕುಸಿದಿದ್ದು, ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಆದ್ದರಿಂದ ಅಡಕೆ ಆಮದು ತಕ್ಷಣ ನಿಲ್ಲಿಸಬೇಕು. ಅಡಕೆ ಕಾರ್ಯಪಡೆ ಅಧ್ಯಕ್ಷ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಮನವಿ ಆಲಿಸಿ, ಅಡಕೆ ಆಮದು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಎಎಪಿ ಕಾರ್ಯಕರ್ತರು ಆಗ್ರಹಿಸಿದರು.