ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA AIRPORT| 26 ಏಪ್ರಿಲ್ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ಸಂಬಂಧ ಹೋರಾಟ, ಹಕ್ಕೊತ್ತಾಯಗಳು ಪುನಾರಂಭವಾಗಿವೆ. ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡದಿರುವಂತೆ ಆಮ್ ಆದ್ಮಿ ಪಕ್ಷದ ಶಿವಮೊಗ್ಗ ಘಟಕ ಆಗ್ರಹಿಸಿದೆ.
ಇವತ್ತು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರುನ್ನು ವಿಮಾನ ನಿಲ್ದಾಣಕ್ಕೆ ಶಿಫಾರಸು ಮಾಡುವ ಮೂಲಕ ರಾಜ್ಯ ಸರ್ಕಾರ ಕೆಟ್ಟ ಪರಂಪರೆಗೆ ನಾಂದಿ ಹಾಡುತ್ತಿದೆ ಎಂದು ಆರೋಪಿಸಿದರು.
ಯಡಿಯೂರಪ್ಪ ಹೆಸರು ಏಕೆ ಬೇಡ?
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಿದೆ. ಯಡಿಯೂರಪ್ಪ ಅವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದಮೆ ಇದೆ. ಅಲ್ಲದೆ ಜೀವಂತ ಇರುವ ವ್ಯಕ್ತಿಗಳ ಹೆಸರನ್ನು ಸೂಚಿಸುವಂತಿಲ್ಲ ಎಂಬ ನಿಲುವಿದೆ. ಹೀಗಿದ್ದೂ ಯಡಿಯೂರಪ್ಪ ಅವರ ಹೆಸರು ಇಡುವುದು ಸರಿಯಲ್ಲ ಎಂದು ಆಮ್ ಆದ್ಮಿ ಪಕ್ಷ ಮನವಿಯಲ್ಲಿ ತಿಳಿಸಿದೆ.
ಯಡಿಯೂರಪ್ಪ ಅವರ ಹೆಸರಿನ ಬದಲು ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೊಡುಗೆ ನೀಡಿದವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು. ಡಾ.ಬಿ.ಆರ್.ಅಂಬೇಡ್ಕರ್, ಸರ್ ಎಂ.ವಿಶ್ವೇಶ್ವರಯ್ಯ, ರಾಷ್ಟ್ರಕವಿ ಕುವೆಂಪು, ವೀರ ಶಿವಪ್ಪನಾಯಕ ಅವರ ಹೆಸರುಗಳನ್ನು ಇಡುವುದು ಸೂಕ್ತ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರಮುಖರಾದ ರವಿಕುಮಾರ್, ಅಮೃತ್ ರಾಸ್, ಮೋಹನ್ ಎಂ.ಕೆ, ಗಣೇಶ್ ಸೋಗೂಡು, ಮದನ್, ನವಿಲೇಶ್, ಸುರೇಶ್ ಕೋಟೆಕರ್, ಎಸ್.ಎಲ್ ಧನಂಜಯ, ನೇತ್ರಾವತಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವೆಲ್ಲ ಹೆಸರು ಇಡುವಂತೆ ಒತ್ತಾಯವಿದೆ? ಇಲ್ಲಿದೆ ಲಿಸ್ಟ್
AIRPORT