ಶಿವಮೊಗ್ಗ ಸಿಟಿಯಲ್ಲಿ ಕಂಡಕಂಡಲ್ಲಿ ಅನಧಕೃತವಾಗಿ ನಿಲ್ಲಿಸಿದ್ದ ವಾಹನಗಳು ಪೊಲೀಸ್‌ ವಶಕ್ಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ನಗರ ವ್ಯಾಪ್ತಿಯ ರಸ್ತೆ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡಲಾಗಿದ್ದ ಒಟ್ಟು 84 ವಾಹನಗಳನ್ನು ಪತ್ತೆ ಹಚ್ಚಲಾಗಿದ್ದು, ಇದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಉಂಟಾಗುತ್ತಿದ್ದ ಅಡಚಣೆಯನ್ನು ತಪ್ಪಿಸಲು ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವಾಹನಗಳ ಮೇಲೆ ನೋಟಿಸ್ ಅಂಟಿಸಿ ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ನೋಟಿಸ್‌ಗೆ ಸ್ಪಂದಿಸಿದ ಮಾಲೀಕರು 68 ವಾಹನಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಿದ್ದರು. ಉಳಿದ 16 ವಾಹನಗಳನ್ನು ಪೊಲೀಸರು ಟೋಯಿಂಗ್ ಮೂಲಕ ತೆರವುಗೊಳಿಸುತ್ತಿದ್ದಾರೆ. ಅಶೋಕ ನಗರ ವ್ಯಾಪ್ತಿಯಲ್ಲಿ 6 ವಾಹನಗಳನ್ನು ತೆರವುಗೊಳಿಸಲಾಗಿದೆ. ಸಾರ್ವಜನಿಕರು ರಸ್ತೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತವಾಗಿ ವಾಹನ ನಿಲುಗಡೆ ಮಾಡದಂತೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Traffic-Police-Tow-vehicles.