ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 21 ಸೆಪ್ಟೆಂಬರ್ 2019
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್’ನ ಎರಡು ದಿನದ ರಾಜ್ಯ ಕಾರ್ಯಕಾರಿಣಿ ಸಭೆ ಶಿವಮೊಗ್ಗದಲ್ಲಿ ಆರಂಭವಾಗಿದೆ. ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ನಡೆಯುತ್ತಿರುವ ಸಭೆಗೆ, ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರು ಆಗಮಿಸಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷ ನಾರಾಯಣ, ದೇಶದಲ್ಲಿ ಭಾಷೆ ಮತ್ತು ಜಾತಿ ಆಧಾರದಲ್ಲಿ ಸಮಾಜವನ್ನು ಒಡೆಯುವ ಸಂಚುಗಳು ನಡೆಯುತ್ತಿವೆ. ಇದರ ವಿರುದ್ಧ ಯುವ ಸಮೂಹ ಜಾಗೃತವಾಗಿರಬೇಕು. 370ನೆ ವಿಧಿಗೆ ತಿದ್ದುಪಡಿ ತರುವ ಮೂಲಕ ಕೇಂದ್ರ ಸರ್ಕಾರ ಕಾಶ್ಮೀರವನ್ನು ಭಾರತದ ಭಾಗವಾಗಿಸಿದೆ. ಎಬಿವಿಪಿ ಸಂಘಟನೆ ಕೂಡ ಬಹು ವರ್ಷದಿಂದ ಇದಕ್ಕಾಗಿ ಹೋರಾಟ ನಡೆಸಿತ್ತು. ಲಾಲ್ ಚೌಕ್’ನಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಲಾಗಿತ್ತು ಎಂದರು.

ಎಬಿವಿಪಿ ರಾಜ್ಯಾಧ್ಯಕ್ಷ ಡಾ.ಅಲ್ಲಮ ಪ್ರಭು, ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ವಾಮಿ ಮರುಳಾಪುರ, ರಾಷ್ಟ್ರೀಯ ಸಮಿತಿ ಸದಸ್ಯ ರಾಮಚಂದ್ರಶೆಟ್ಟಿ ಸೇರಿದಂತೆ ಪ್ರಮುಖರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





