ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020
ಡ್ರಗ್ಸ್ ಮಾಫಿಯಾವನ್ನು ಮಟ್ಟಹಾಕಲು ಪ್ರಬಲ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಡ್ರಗ್ಸ್ ದಂಧೆ ಅನ್ನುವುದು ಭಯೋತ್ಪಾದನೆಯ ಭಾಗ. ಅನೇಕ ನಟ, ನಟಿಯರು ಈ ಜಾಲದಲ್ಲಿ ಸಿಲುಕಿದ್ದಾರೆ. ಇವರ ಜೊತೆಗೆ ಹಲವು ಉದ್ಯಮಿಗಳ ಹೆಸರು ಕೇಳಿ ಬರುತ್ತಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರು ಯಾರೆ ಅಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ವತಿಯಿಂದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮಾದಕ ವಸ್ತು ಮುಕ್ತ ಕ್ಯಾಂಪಸ್ ನಿರ್ಮಿಸಬೇಕಿದೆ. ಈ ಹಿನ್ನೆಲೆಯಲ್ಲಿ ಡ್ರಗ್ಸ್ ಮಾಫಿಯಾ ಮಟ್ಟಹಾಕಲು ಪ್ರಬಲ ಕಾನೂನು ತರಬೇಕಿದೆ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಶಿವಮೊಗ್ಗ ನಗರ ಸಹ ಕಾರ್ಯದರ್ಶಿ ಪ್ರೇಮ್ ಕುಮಾರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್, ವಿವೇಕ್, ಸುಭಾಷ್, ಯೋಗೇಶ್, ಸುಚೇಂದ್ರ, ರಘುವೀರ್, ಲಿಂಗರಾಜು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]