SHIVAMOGGA LIVE NEWS | JOB SCAM | 30 ಏಪ್ರಿಲ್ 2022
ಪಿಎಸ್ಐ ಹಾಗೂ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಾಗಿರುವ ಅಕ್ರಮದ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಡಿಸಿ ಕಚೇರಿ ಸಹಾಯಕ ಅಧಿಕಾರಿ ಬಿ.ಎಸ್. ಕಡಬಾವಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪೊಲೀಸ್ ನೇಮಕಾತಿ ಪರೀಕ್ಷೆ ಹಾಗೂ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಬಹಳಷ್ಟು ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿದೆ. ಈ ಅಕ್ರಮದಿಂದ ಬಡ ಹಾಗೂ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಿದೆ. ಹಾಗಾಗಿ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಪರೀಕ್ಷೆ ನಡೆದ ಸಂದರ್ಭದಲ್ಲೇ ಅಕ್ರಮದ ಸುಳಿವು ಸಿಕ್ಕಿದ್ದರೂ ಪರೀಕ್ಷಾ ಪ್ರಾಧಿಕಾರ ಕ್ರಮ ತೆಗೆದುಕೊಂಡಿಲ್ಲ. ಈ ಅಕ್ರಮದಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ, ಕೆಲ ಪ್ರಾಧ್ಯಾಪಕರು ಹಾಗೂ ರಾಜಕೀಯ ವ್ಯಕ್ತಿಗಳನ್ನು ಬಂಧಿಸಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು. ತುರ್ತು ವಿಚಾರಣೆಗಾಗಿ ವಿಶೇಷ ತಂಡ ರಚಿಸಬೇಕೆಂದು ಆಗ್ರಹಿಸಿದರು. ಎಬಿವಿಪಿ ಮಹಾನಗರ ಕಾರ್ಯದರ್ಶಿ ಎಚ್.ಕೆ.ಪ್ರವೀಣ್ ಇತರರಿದ್ದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಯಡಿಯೂರಪ್ಪ ಆಗಮನ, ಭದ್ರಾವತಿಯಲ್ಲಿ ಗೆಲುವು ಸಾಧಿಸಲು ವಿಶೇಷ ಪ್ರಯತ್ನದ ಸುಳಿವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200