ಶಿವಮೊಗ್ಗದ ಎಂಆರ್‌ಎಸ್‌ ಸರ್ಕಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ, ಪೊಲೀಸರಿಗೆ ಮನವಿ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಖಂಡನೀಯ. ಜಾತಿ ಹಾಗೂ ಧರ್ಮವನ್ನು ನೋಡದೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಘಟಕದಿಂದ (ABVP protest) ಎಂಆರ್‌ಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿಗಳಿಗೆ ಡ್ರಗ್ಸ್ ಹಾಗೂ ಗಾಂಜಾ ಪದಾರ್ಥಗಳು ಸುಲಭವಾಗಿ ಸರಬರಾಜು ಆಗುತ್ತಿದ್ದು ಈ ಹಿಂಸಾತ್ಮಕ ಕೃತ್ಯಕ್ಕೆ ಅದುವೇ ಕಾರಣ. ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆ ರಾಜ್ಯದಲ್ಲಿ ಡ್ರಗ್ಸ್ ಜಾಲ ಭೇದಿಸಲು ವಿಫಲವಾಗಿವೆ. ಮಾದಕ ವಸ್ತು ನಿರ್ಮೂಲನೆಗೆ ಪೊಲೀಸರು ಆದ್ಯತೆ ನೀಡಿ, ಸೂಕ್ತ ಕಾರ್ಯಾಚರಣೆ ನಡೆಸಬೇಕು ಎಂದು ಆಗ್ರಹಿಸಿದರು.

ABVP-protest-at-MRS-Circle-in-Shimoga

ಈ ಪ್ರಕರಣದ ನಂತರ ಪೋಷಕರು ಹಾಗೂ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ಇದ್ದಾರೆ. ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣಕ್ಕೆ ಬೇಕಾದ ಪೂರಕ ವಾತಾವರಣ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಬಿವಿಪಿ ಪದಾಧಿಕಾರಿಗಳಾದ ಆದಿತ್ಯಶೆಟ್ಟಿ, ನಂದನ್, ರವಿ ಇರೋಜ, ವಿನಯ್, ಅಭಿಷೇಕ್ ಇದ್ದರು.

ಇದನ್ನೂ ಓದಿ – ಸಿಎಂಗೆ ಡಿಸಿಎಂ ಪತ್ರ, ಶಿವಮೊಗ್ಗದ ಇಬ್ಬರ ಹೆಸರು ಪ್ರಸ್ತಾಪ, ಆಕಾಂಕ್ಷಿಗಳಿಗೆ ನಿರಾಸೆ, ಏನಿದೆ ಪತ್ರದಲ್ಲಿ?

number-1-advt-copy-new.webp

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment