ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅತಿಥಿ ಉಪನ್ಯಾಸಕರಿಲ್ಲದೆ ಪಾಠಗಳು ನಡೆಯುತ್ತಿಲ್ಲ. ಸರ್ಕಾರ ಕೂಡಲೆ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರು ಇಲ್ಲದೆ ಪಾಠಗಳು ನಡೆಯುತ್ತಿಲ್ಲ. ಆದರೆ ವಿಶ್ವವಿದ್ಯಾಲಯ ಪರೀಕ್ಷೆಯ ದಿನಾಂಕ ಘೋಷಣೆ ಮಾಡಿದೆ. ಹಾಗಾಗಿ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಿದ್ಯಾರ್ಥಿಗಳಿಗೆ ಕೂಡಲೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು, ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ತೆರೆಯಬೇಕು, ಕಾಲೇಜು ಮತ್ತು ಹಾಸ್ಟೆಲ್ಗಳನ್ನು ತೆರೆದಿದ್ದರೂ ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ ಮಹಾನಗರ ಕಾರ್ಯದರ್ಶಿ ಧನುಷ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]