ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021
ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಬಗೆಹರಿಸಬೇಕು, ಬಸ್ ಸೌಕರ್ಯ ಪುನಾರಂಭ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆನ್‍ಲೈನ್ ತರಗತಿಗಳು ನಡೆಯುತ್ತಿದ್ದು, ಜಿಲ್ಲೆಯ ವಿವಿಧೆಡೆ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಉಂಟಾಗಿದೆ. ಇದರಿಂದ ವಿದ್ಯಾರ್ಥಿಗಳು ಸಮರ್ಪಕವಾಗಿ ತರಗತಿಯಲ್ಲಿ ಭಾಗವಹಿಸಲು ಆಗುತ್ತಿಲ್ಲ. ಆದ್ದರಿಂದ ಕೂಡಲೆ ನೆಟ್‍ವರ್ಕ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.
ಇನ್ನು, ಲಾಕ್ ಡೌನ್ ಹಿನ್ನೆಲೆ ಜಿಲ್ಲೆಯಾದ್ಯಂತ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಈಗ ಬಸ್ ಸೇವೆ ಪುನಾರಂಭವಾಗಿದೆ. ಆದರೆ ಬಹುತೇಕ ಕಡೆಗೆ ಬಸ್ಸುಗಳು ಸಂಚರಿಸುತ್ತಿಲ್ಲ. ಈ ಮಾರ್ಗದಲ್ಲೂ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ, ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಎಬಿವಿಪಿ ಮಹಾನಗರ ಕಾರ್ಯದರ್ಶಿ ಧನುಷ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200